10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ
10th National Ayurveda Day Celebration
ವಿಜಯಪುರ 19: 10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ ಅಂಗವಾಗಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಶಲ್ಯತಂತ್ರ ವಿಭಾಗ ಮತ್ತು ಬಿ.ಎಲ್.ಡಿ.ಇ(ಡೀಮ್ಡ್) ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಸಹಯೋಗದಲ್ಲಿ ಬುಧವಾರ ವಿಶ್ವ ರೋಗಿಗಳ ಸುರಕ್ಷತಾ ದಿನದ ಅಂಗವಾಗಿ ಜಾಗೃತಿ ಮಾತುಕತೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಸಾಮಾನ್ಯ ಶಸ್ತ್ರಚಿಕಿತ್ಸೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಆನಂದ ಸುಂತಾನ, ರೋಗಿಗಳ ಸುರಕ್ಷತೆಗೆ ಅಗತ್ಯವಾಗಿರುವ ಕ್ರಮಗಳು, ವಹಿಸಬೇಕಿರುವ ಮುಂಜಾಗೃತೆ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಬಿ.ಎಲ್.ಡಿ.ಇ ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಡಾ. ಎಂ. ಬಿ. ಪಾಟೀಲ, ಆಯುರ್ವೇದ ಕಾಲೇಜಿನ ಡಾ. ಪ್ರಸಾದಶಕ್ತಿ ಜಿ. ಗಣ್ಣೂರ ಮುಂತಾದವರು ಉಪಸ್ಥಿತರಿದ್ದರು. ಆಯುರ್ವೇದ ವೈದ್ಯ ವಿದ್ಯಾರ್ಥನಿ ಡಾ. ಸ್ನೇಹಾ ಬಂಗಡಿ ದೇಸಾಯಿ ನಿರೂಪಿಸಿದರು. ವೈದ್ಯಕೀಯ ವಿದ್ಯಾರ್ಥಿಗಳು, ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 