ಅಕ್ರಮವಾಗಿ ಸಾಗಿಸುತ್ತಿದ್ದ 11.49 ಲಕ್ಷ ನಗದು ಹಣ ವಶಕ್ಕೆ : ಹುಕ್ಕೇರಿ ತಾಲೂಕಿನ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ವೇಳೆ ಪತ್ತೆ
ಬೆಳಗಾವಿ : ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 11.49 ಲಕ್ಷ ರೂ. ನಗದು ಹಣವನ್ನು ಪೊಲೀಸರು ಹಾಗೂ ಎಫ್ ಎಸ್ ಟಿ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ನಡೆದಿದೆ.
ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಹತ್ತಿರ ತಪಾಸಣೆ ನಡೆಸುತ್ತಿರುವ ಅಧಿಕಾರಿಗಳು ಬುಧವಾರ ಮತ್ತಷ್ಟು ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಚೆಕ್ ಪೋಸ್ಟ್ ನಲ್ಲಿ ದಾಖಲೆಗಳಿಲ್ಲದ ರೂ.11,49,000 ನಗದನ್ನು ಎಸ್‌ಎಸ್‌ಟಿ, ಎಫ್‌ಎಸ್‌ಟಿ, ಎಂಸಿಸಿ ನೋಡಲ್ ಅಧಿಕಾರಿಗಳು ಹುಕ್ಕೇರಿ ಸಿಪಿಐ, ಎಂ.ಎಂ ತಹಶೀಲ್ದಾರ, ಸಂಕೇಶ್ವರ ಸಿಪಿಐ ಪ್ರಲ್ಹಾದ ಚನ್ನಗೇರಿ, ಪೋಲಿಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದರು. ಮುಂದಿನ ಕ್ರಮಕ್ಕಾಗಿ ಆದಾಯ ತೆರಿಗೆ ಇಲಾಖೆಗೆ ತಿಳಿಸಲಾಗಿದೆ.