ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ
112th foundation day of Kannada Sahitya Parishad
ಲೋಕದರ್ಶನ ವರದಿ
ಮುಂಡಗೋಡ : ಕನ್ನಡ ನಾಡು, ನುಡಿ, ಜಲ, ನೆಲ ಹಾಗೂ ಸಂಸ್ಕೃತಿಯ ಸಂರಕ್ಷಣೆ ಕನ್ನಡ ಸಾಹಿತ್ಯ ಪರಿಷತ್ತಿನ ಮುಖ್ಯ ಉದ್ದೇಶವಾಗಿದ್ದು, ಈ ಕಾರ್ಯವನ್ನು ಮುಂದೆಯೂ ನಿರಂತರವಾಗಿ ಮುಂದುವರಿಸಿಕೊಂಡು ಹೋಗುವುದು ಪರಿಷತ್ತಿನ ಕರ್ತವ್ಯವಾಗಿದೆ ಎಂದು ಸುರೇಶ್ ಕಲ್ಲೋಳ್ಳಿ ಹೇಳಿದರು. ಅವರು ಮೇ 5ರಂದು ನಿವೃತ್ತ ನೌಕರರ ಭವನದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಇದುವರೆಗೆ 88 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ದೆಹಲಿ ಸೇರಿದಂತೆ ವಿವಿಧ ಕಡೆಗಳಲ್ಲಿ ಯಶಸ್ವಿಯಾಗಿ ಆಯೋಜಿಸಿದ್ದು, ನಾಲ್ಕು ಬಾರಿ ಮಹಿಳಾ ಸಾಹಿತಿಗಳನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಮಹಿಳೆಯರಿಗೂ ಪ್ರಾತಿನಿಧ್ಯ ನೀಡಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಭಾಷ್ ಡೋರಿ, ಮುಂಡಗೋಡ ಕನ್ನಡ ಸಾಹಿತ್ಯ ಪರಿಷತ್ತು ಅನೇಕ ಕನ್ನಡಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಕನ್ನಡದ ಬಗ್ಗೆ ಜಾಗೃತಿ ಮೂಡಿಸಿದೆ. ಇತ್ತೀಚೆಗೆ ನಡೆದ ಎಂಟನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ನಡೆದಿರುವುದೇ ಅದರ ಸಾಕ್ಷಿಯಾಗಿದೆ ಎಂದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ವಸಂತ ಕೋಣಸಾಲಿ ಮಾತನಾಡಿ, ವಿದ್ಯಾರ್ಥಿಗಳು ಇಂಗ್ಲಿಷ್, ಫ್ರೆಂಚ್, ಜರ್ಮನ್ ಸೇರಿದಂತೆ ಯಾವುದೇ ಭಾಷೆ ಕಲಿತರೂ ತಾಯಿ ಭಾಷೆಯಾದ ಕನ್ನಡವನ್ನು ಮರೆಯಬಾರದು.
ಮನೆ ಮತ್ತು ಹೊರಗಿನ ವ್ಯವಹಾರಗಳಲ್ಲಿ ಕನ್ನಡವನ್ನು ಬಳಸಿದಾಗ ಮಾತ್ರ ಭಾಷೆ ಉಳಿಯುತ್ತದೆ. ಇಂಗ್ಲಿಷ್ ಮಾಧ್ಯಮದಲ್ಲಿ ಓದುತ್ತಿರುವ ಮಕ್ಕಳಿಗೂ ಪಾಲಕರು ಕನ್ನಡದಲ್ಲಿಯೇ ಪ್ರಾಣಿ, ಪಕ್ಷಿ ಹಾಗೂ ಕೃಷಿ ಕುರಿತು ತಿಳಿಸುವುದು ಅಗತ್ಯ. ಇಲ್ಲವಾದರೆ ಮುಂದಿನ ಪೀಳಿಗೆ ಕನ್ನಡ ಭಾಷೆಯನ್ನು ಮರೆಯುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಕಾರ್ಯಕ್ರಮದ ಆರಂಭದಲ್ಲಿ ನಾಗರಾಜ ಅರಸಲಿ ಸ್ವಾಗತಿಸಿದರು. ಸುಭಾಷ್ ವಡ್ದರ್ ವಂದಿಸಿದರು. ವಿನಾಯಕ ಸೆಟ್ ಕಾರ್ಯಕ್ರಮವನ್ನು ನಿರೂಪಿಸಿದರು. ಸಭೆಯಲ್ಲಿ ಆನಂದ ಹೊಸೂರು, ಸಿ.ಎನ್. ಸುರಕೋಡ್, ಮಂಜುನಾಥ ಕಂಬಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 