ನರೇಗಾದಡಿ 125 ದಿನ ಉದ್ಯೋಗ: ಗ್ರಾಮ ಪಂಚಾಯಿತಿಗಳಿಗೆ ಅರ್ಜಿ ಸಲ್ಲಿಸಲು ಸೂಚನೆ
125 days of employment under NREGA: Instructions issued to submit applications to Gram Panchayats
ನರಗುಂದ 01: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಗ್ರಾಮೀಣ ಕಾರ್ಮಿಕರಿಗೆ ವರ್ಷಕ್ಕೆ 125 ದಿನಗಳ ಉದ್ಯೋಗ ಒದಗಿಸಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ ಚಿನಗುಂಡಿ ತಿಳಿಸಿದ್ದಾರೆ.
ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯೋಜನೆ ಜಾರಿಯಲ್ಲಿದ್ದು, ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಕಾರ್ಮಿಕರ ವಲಸೆ ತಡೆಯಲು ಸ್ಥಳೀಯವಾಗಿಯೇ ಉದ್ಯೋಗ ನೀಡಲಾಗುತ್ತಿದೆ.
ಕೆಲಸ ಬಯಸುವ ಕಾರ್ಮಿಕರು ತಮ್ಮ ಗ್ರಾಮ ಪಂಚಾಯಿತಿಗೆ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ 15 ದಿನಗಳೊಳಗೆ ಕೆಲಸ ನೀಡುವುದು ಪಂಚಾಯಿತಿಯ ಜವಾಬ್ದಾರಿಯಾಗಿದ್ದು, ವಿಳಂಬವಾದಲ್ಲಿ ನಿರುದ್ಯೋಗ ಭತ್ಯೆಗೆ ಶಿಫಾರಸು ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ನರೇಗಾದಡಿ ವಿವಿಧ ಕಾಮಗಾರಿಗಳು
ಕಾಲುವೆ ಸ್ವಚ್ಛತೆ, ಕೆರೆ ಅಭಿವೃದ್ಧಿ, ಸಸಿ ನೆಡುವುದು, ಚರಂಡಿ ನಿರ್ಮಾಣ, ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಪ್ರತಿದಿನದ ಕೂಲಿ ?382 ಇದ್ದು, 125 ದಿನ ಕೆಲಸ ಮಾಡಿದರೆ ಒಬ್ಬ ಕಾರ್ಮಿಕರಿಗೆ ಸುಮಾರು ?47,750 ಆದಾಯ ದೊರೆಯಲಿದೆ ಎಂದು ಮಾಹಿತಿ ನೀಡಲಾಗಿದೆ.ಈಗಾಗಲೇ ಇ-ಕೆವೈಸಿ ಪೂರ್ಣಗೊಳಿಸಿರುವ ಕಾರ್ಮಿಕರು ತಮ್ಮ ಕಾರ್ಯಬಂಧು (ಮೇಟ್) ಮೂಲಕ ಹೆಸರು ನೋಂದಾಯಿಸಿ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸುವಂತೆ ಮನವಿ ಮಾಡಲಾಗಿದೆ. ಹೊಸ ಗ್ರಾಮೀಣ ಉದ್ಯೋಗ ಕಾರ್ಡ್ಗಳನ್ನು ವಿತರಿಸುವವರೆಗೆ ಹಳೆಯ ನರೇಗಾ ಜಾಬ್ ಕಾರ್ಡ್ಗಳು ಮಾನ್ಯವಾಗಿರುತ್ತವೆ. ಜಾಬ್ ಕಾರ್ಡ್ ಇಲ್ಲದ ಕುಟುಂಬಗಳು ಗ್ರಾಮ ಪಂಚಾಯಿತಿಯಲ್ಲಿ ನೋಂದಣಿ ಮಾಡಿಕೊಂಡು ಹೊಸ ಕಾರ್ಡ್ ಪಡೆಯಬಹುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 