ದಿ.29 ರಂದು 139 ನೇ ವಿಶ್ವ ಕಾರ್ಮಿಕರ ದಿನಾಚರಣೆ : ತುಕಾರಾಮ ಪಾತ್ರೋಟಿ
139th International Workers' Day: Tukaram Patroti
ಕೊಪ್ಪಳ 27 : ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಂಋಗಅ) ಜಿಲ್ಲಾ ಸಮಿತಿಯಿಂದ ನಗರದ ಸಾಹಿತ್ಯ ಭವನದಲ್ಲಿ ನಾಳೆ ದಿ.29 ರಂದು ಗುರುವಾರ ಬೆಳಿಗ್ಗೆ 10.30 ಕ್ಕೆ 139 ನೇ ವಿಶ್ವ ಕಾರ್ಮಿಕರ ದಿನಾಚರಣೆ ಆಚರಿಸಲಾಗುವುದು ಎಂದು ಕಟ್ಟಡ ಕಟ್ಟುವ, ಕಲ್ಲು ಒಡೆಯುವ ಕ್ವಾರೆ ಕಾರ್ಮಿಕರ ಫೆಡರೇಶನ್ ಜಿಲ್ಲಾಧ್ಯಕ್ಷ ತುಕರಾಮ ಪಾತ್ರೋಟಿ ತಿಳಿಸಿದ್ದಾರೆ.
ಉದ್ಘಾಟನೆಯನ್ನು ಬೆಂಗಳೂರಿನ ಸಮಕಾಲಿನ ಸಾಮಾಜಿಕ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಕಾಮ್ರೆಡ್ ಡಾ. ಬಿ.ಆರ್ ಮಂಜುನಾಥ್ ನೆರವೇರಿಸುವರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಟ್ಟಡ ಕಾರ್ಮಿಕರ ಫೆಡರೇಶನ್ ಗೌರವ ಅಧ್ಯಕ್ಷ ಡಾ. ಕೆ.ಎಸ್. ಜನಾರ್ಧನ್ ವಹಿಸುವರು, ಮುಖ್ಯ ಅತಿಥಿಗಳಾಗಿ ಭಾರತ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಂಟ್ರೋಲ್ ಕಮಿಷನ್ ಸದಸ್ಯ ಕಾಮ್ರೇಡ್ ನಾಗಭೂಷಣ ರಾವ್ ಕೊನೇರು, ನಗರ ಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಭಾರತ ಕಮ್ಯುನಿಸ್ಟ್ ಪಕ್ಷದ ಕೊಪ್ಪಳ ಜಿಲ್ಲಾ ಮಂಡಳಿ ಕಾರ್ಯದರ್ಶಿ ಹುಲುಗಪ್ಪ ಅಕ್ಕಿ ರೊಟ್ಟಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ರೋಹಿಣಿ ಕೊಟೆಗಾರ, ಭಾಗ್ಯನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ತುಕಾರಾಮಪ್ಪ ಗಡಾದ್, ಉಪಾಧ್ಯಕ್ಷ ಹೊನ್ನೂರ್ ಸಾಬ್ ಬೈರಾಪುರ, ಮೋಚಿ ಸಮಾಜದ ಅಧ್ಯಕ್ಷ ಮಂಜಪ್ಪ ದರಗದಕಟ್ಟಿ ಪಾಲ್ಗೊಳ್ಳುವರು.
ರಾಜ್ಯ ಕಟ್ಟಡ ಕಟ್ಟುವ ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಫೆಡರೇಶನ್ ಜಿಲ್ಲಾ ಕಾರ್ಯಾಧ್ಯಕ್ಷ ಎಸ್.ಎ.ಗಫಾರ, ಕಟ್ಟಡ ಕಟ್ಟುವ, ಕಲ್ಲು ಒಡೆಯುವ ಕ್ವಾರೆ ಕಾರ್ಮಿಕರ ಫೆಡರೇಶನ್ ಜಿಲ್ಲಾಧ್ಯಕ್ಷ ತುಕರಾಮ ಪಾತ್ರೋಟಿ, ಕಟ್ಟಡ ಕಾರ್ಮಿಕರ ಫೆಡರೇಶನ್ ಕೊಪ್ಪಳ ತಾಲೂಕು ಅಧ್ಯಕ್ಷ ನೂರಸಾಬ್ ಹೊಸಮನಿ,ಕಟ್ಟಡ ಕಾರ್ಮಿಕರ ಫೆಡರೇಶನ್ ಕೊಪ್ಪಳ ತಾಲೂಕು ಕಾರ್ಯದರ್ಶಿ ರಾಜಸಾಬ, ತಹಸೀಲ್ದಾರ್,ಕಟ್ಟಡ ಕಾರ್ಮಿಕರ ಫೆಡರೇಶನ್ ಕೊಪ್ಪಳ ತಾಲೂಕು ಸಹ ಕಾರ್ಯದರ್ಶಿ ಮೌಲಾಹುಸೇನ್ ಹಣಿಗಿ, ಕಟ್ಟಡ ಕಾರ್ಮಿಕರ ಫೆಡರೇಶನ್ ಕೊಪ್ಪಳ ತಾಲೂಕು ಉಪಾಧ್ಯಕ್ಷ ಜಾಫರ್ ಕುರಿ,ರಾಜ್ಯ ಕಟ್ಟಡ ಕಟ್ಟುವ, ಕಲ್ಲು ಒಡೆಯುವ ಕ್ವಾರೆ ಕಾರ್ಮಿಕರ ಫೆಡರೇಶನ್ ಜಿಲ್ಲಾ ಹಾಗೂ ರಾಜ್ಯ ಕಾರ್ಯದರ್ಶಿ ಕಾಮ್ರೇಡ್ ಎ.ಎಲ್. ತಿಮ್ಮಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಮ್ರೆಡ್ ಮುಮ್ತಾಜ್ ಬೇಗಂ, ಎಐವೈಎಫ್ ಜಿಲ್ಲಾ ಸಂಚಾಲಕ ಕಾಮ್ರೇಡ್ ಪ್ರಸಾದ್ ಕಾಳೆ ಸೇರಿದಂತೆ ಅನೇಕರು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 