ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ
15 Couples Reconcile, Setting Aside Differences: A Success for the Family Court
ಧಾರವಾಡ, ಜು.11: ಧಾರವಾಡ ಕುಟುಂಬ ನ್ಯಾಯಾಲಯದಲ್ಲಿ ನಡೆದ ರಾಜಿ ಸಂಧಾನ ಪ್ರಕ್ರಿಯೆಯಲ್ಲಿ ಸುಮಾರು 55 ಪ್ರಕರಣಗಳು ಯಶಸ್ವಿಯಾಗಿ ಇತ್ಯರ್ಥಗೊಂಡಿದ್ದು, ಅವುಗಳಲ್ಲಿ ಪ್ರಮುಖವಾಗಿ 15 ದಂಪತಿಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪುನರ್ಮಿಲನಗೊಂಡು ಮತ್ತೆ ಒಂದಾಗಿ ಜೀವನ ಸಾಗಿಸಲು ನಿರ್ಧರಿಸಿದ್ದಾರೆ.
ಪುನರ್ಮಿಲನಗೊಂಡ ದಂಪತಿಗಳಿಗೆ ಹಾರ ಹಾಕಿ ಶುಭಾಶಯ ಕೋರಲಾಯಿತು. ಕುಟುಂಬ ಸದಸ್ಯರು ಹಾಗೂ ನ್ಯಾಯಾಲಯದ ಸಿಬ್ಬಂದಿ ಈ ಬೆಳವಣಿಗೆಯನ್ನು ಸಂತಸದ ಕ್ಷಣವೆಂದು ಸ್ವಾಗತಿಸಿದರು.
ಈ ಕುರಿತು ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ. ವಿಜಯ್, "ಪರಸ್ಪರ ಹೊಂದಾಣಿಕೆ ಮತ್ತು ಸಂವಾದದ ಮೂಲಕ ದಾಂಪತ್ಯ ಜೀವನವನ್ನು ಮುಂದುವರಿಸಲು ದಂಪತಿಗಳು ಒಪ್ಪಿಕೊಂಡು ಸಂತೋಷದಿಂದ ತಮ್ಮ ಮನೆಗಳಿಗೆ ತೆರಳಿದ್ದಾರೆ" ಎಂದು ತಿಳಿಸಿದರು.
ಧಾರವಾಡ ಜಿಲ್ಲಾ ನ್ಯಾಯಾಲಯದ ಎರಡನೇ ಮಹಡಿಯಲ್ಲಿ ಇರುವ ಕುಟುಂಬ ನ್ಯಾಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಟುಂಬ ನ್ಯಾಯಾಲಯದ ನ್ಯಾಯಾಧೀಶ ನಾಗರಾಜಪ್ಪ ಎ.ಕೆ., "ರಾಜಿ ಪ್ರಕ್ರಿಯೆಯಲ್ಲಿ 15 ಜೋಡಿಗಳು ಪುನರ್ಮಿಲನಕ್ಕೆ ಒಪ್ಪಿಕೊಂಡಿವೆ. ಕೆಲ ಜೋಡಿಗಳು 5, 10 ಹಾಗೂ 16 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರೆ, ಮತ್ತೊಂದು ಪ್ರಕರಣದಲ್ಲಿ ಕೇವಲ ಮೂರು ತಿಂಗಳ ದಾಂಪತ್ಯದ ಬಳಿಕ ದೂರವಾಗಿದ್ದ ದಂಪತಿಯೂ ಪುನರ್ಮಿಲನಗೊಂಡಿದೆ" ಎಂದು ಹೇಳಿದರು.
"ಕುಟುಂಬ ಕಲಹಗಳು ಯಾವುದೇ ಮನೆಯಲ್ಲಿ ಉಂಟಾಗಬಹುದು. ಆದರೆ ಸಮಸ್ಯೆಗಳನ್ನು ಮರೆತು ಪರಸ್ಪರ ಅರ್ಥೈಸಿಕೊಂಡು ಜೀವನ ಸಾಗಿಸುವ ಮಹತ್ವವನ್ನು ದಂಪತಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಒಟ್ಟಾಗಿ ಬದುಕಿದರೆ ಜೀವನ ಸುಂದರವಾಗಿರುತ್ತದೆ ಎಂಬುದನ್ನು ಅವರಿಗೆ ತಿಳಿಸಲಾಗಿದೆ" ಎಂದು ಅವರು ಹೇಳಿದರು.
ಈ ಪುನರ್ಮಿಲನ ಪ್ರಕ್ರಿಯೆಗೆ ಧಾರವಾಡದ ವಕೀಲರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಸಹಕಾರ ದೊರೆತಿದ್ದು, ಎಲ್ಲರ ಸಹಯೋಗದಿಂದ 15 ಜೋಡಿಗಳು ಹೊಸ ಜೀವನ ಆರಂಭಿಸಲು ಮುಂದಾಗಿವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅಲ್ಲಪ್ಪ ಎಂ. ಬಡಿಗೇರ ಸೇರಿದಂತೆ ವಕೀಲರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 