ರತ್ನಗಿರಿಯಲ್ಲಿ ಎರಡು ಎಸ್‌ಟಿ ಬಸ್‌ಗಳು ಮುಖಾಮುಖಿ ಡಿಕ್ಕಿ: 15 ವಿದ್ಯಾರ್ಥಿಗಳಿಗೆ ಗಾಯ
15 Students Injured as Two ST Buses Collide Head-On in Ratnagiri
ರತ್ನಗಿರಿ, ಜುಲೈ 2: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (ಎಂಎಸ್‌ಆರ್‌ಟಿಸಿ) ಎರಡು ಬಸ್‌ಗಳು ಬುಧವಾರ ಬೆಳಿಗ್ಗೆ ರತ್ನಗಿರಿ ಜಿಲ್ಲೆಯ ಫಣಸವಾಳೆ ಸಮೀಪದ ಮಿರ್ಜೋಳೆ–ಉಕ್ಷಿ ರಸ್ತೆಯಲ್ಲಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 15 ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಒಂದು ಎಸ್‌ಟಿ ಬಸ್ ಭಾವೆ ಆಡೋಮ್‌ನಿಂದ ರತ್ನಗಿರಿಯತ್ತ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಮತ್ತೊಂದು ಎಸ್‌ಟಿ ಬಸ್‌ಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ 15 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಒಂದು ಬಸ್‌ನ ಚಾಲಕರ ಕಾಲಿಗೆ ಗಂಭೀರ ಗಾಯಗಳಾಗಿವೆ.
ಗಾಯಗೊಂಡ ಎಲ್ಲರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದ ಸ್ಥಿತಿ ಕುರಿತು ತಕ್ಷಣದ ಮಾಹಿತಿ ಲಭ್ಯವಾಗಿಲ್ಲ.
ಅಪಘಾತದ ಬಳಿಕ ವಿದ್ಯಾರ್ಥಿಗಳ ಕಿರುಚಾಟ ಕೇಳಿ ಸ್ಥಳೀಯ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ, ಬಸ್‌ಗಳಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಹೊರತೆಗೆದು ರಕ್ಷಿಸಿದರು.
ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 