ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್ ನಿಂದ ಕೃಷ್ಣಾ ನದಿಗೆ 1500 ಕ್ಯೂಸೇಕ್ ನೀರು ಬಿಡುಗಡೆ
ಬೆಳಗಾವಿ : ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ರಾಜಾಪೂರ ಬ್ಯಾರೇಜ್ ನಿಂದ ಕೃಷ್ಣಾ ನದಿಗೆ 1500 ಕ್ಯೂಸೇಕ್ ನೀರು ಶನಿವಾರ ಬಿಡುಗಡೆ ಮಾಡಲಾಗಿದೆ.
ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಕುಡಿಯುವ ನೀರು ಬಿಡುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಸರಕಾರಕ್ಕೆ ಮನವಿ ಮಾಡಿದ್ದರು.
ಮಹಾರಾಷ್ಟ್ರ ಸಿ ಎಂ ಏಕನಾಥ ಶಿಂಧೆಗೆ ಪತ್ರ ಮುಖೇನ ಮನವಿ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರ ಮನವಿಗೆ ಸ್ಪಂಧಿಸಿ 1500 ಕ್ಯೂಸೇಕ್ ನೀರನ್ನು ಮಹಾರಾಷ್ಟ್ರ ಸರ್ಕಾರ ಬಿಡುಗಡೆ ಮಾಡಿದೆ.
ಅಲ್ಲದೆ ಕೆಲವು ದಿನಗಳ ಹಿಂದೆ ಪಕ್ಷಾತೀತವಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ನೀರು ಬಿಡುವಂತೆ ಜನಪ್ರತಿನಿಧಿಗಳು ಮನವಿ ಮಾಡಿದ್ದರು. ಅಲ್ಲದೆ
ಬತ್ತುವ ಹಂತ ತಲುಪಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ ಬಂದಂತಾಗಿದೆ. ನೀರಲ್ಲದೆ ಹೈರಾಣಾಗಿದ್ದ ಬೆಳಗಾವಿ ಜಿಲ್ಲೆಯ ನದಿ ತೀರದ ಜನರು ನಿರಾಳವಾಗಿ ನಿಟ್ಟೂಸಿರು ಬಿಟ್ಟಿದ್ದಾರೆ.