ಬೆಳಗಾವಿ

ಕ್ಯಾಂಟರ್ ಡಿಕ್ಕಿಗೆ 17 ವರ್ಷದ ಬಾಲಕ ಸಾವು; ಇಬ್ಬರ ವಿರುದ್ಧ ಪ್ರಕರಣ ದಾಖಲು

ಕ್ಯಾಂಟರ್ ಡಿಕ್ಕಿಗೆ 17 ವರ್ಷದ ಬಾಲಕ ಸಾವು; ಇಬ್ಬರ ವಿರುದ್ಧ ಪ್ರಕರಣ ದಾಖಲು

ಲೋಕದರ್ಶನ ವರದಿ 

ಕಿತ್ತೂರು: ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 17 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.  ಕಲಬಾಂವಿ ಗ್ರಾಮದ ಪರಶುರಾಮ ರಾಯಪ್ಪ ಕುರಕುರಿ (63) ಅವರು ನೀಡಿದ ದೂರಿನ ಪ್ರಕಾರ, ಜುಲೈ 31ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಕಿತ್ತೂರು ಪಟ್ಟಣದ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣದ ಎದುರಿನ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಈ ದುರ್ಘಟನೆ ನಡೆದಿದೆ.  

ಧಾರವಾಡ ಕಡೆಯಿಂದ ಬೆಳಗಾವಿ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಅಶೋಕ್ ಲೇಲ್ಯಾಂಡ್ ಕ್ಯಾಂಟರ್ (ಕೆಎ-02-ಎಚ್‌ಎಚ್‌-8931) ಚಲಾಯಿಸುತ್ತಿದ್ದ ಮೊಹಮ್ಮದ್ ಕಿಬ್ರಿಯಾ ಎಂಬಾತ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದ್ದ ಪರಶುರಾಮ ಅವರ ಪುತ್ರ ಶ್ರವಣಕುಮಾರ ಶಾಂತಪ್ಪ ಕುರಕುರಿ (17) ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಶ್ರವಣಕುಮಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.  

ಅಪಘಾತಕ್ಕೆ ಸಂಬಂಧಿಸಿದಂತೆ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದೆ ವಾಹನ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಬಸ್ ನಿಲ್ಲಿಸಿದ್ದ ಆರೋಪದ ಮೇಲೆ ಉತ್ತರ ಪ್ರದೇಶ ಮೂಲದ ವಿನೇಶ್ಚಂದ್ರ ದಿನೇಶ್ಚಂದ್ರ ಶರ್ಮಾ ವಿರುದ್ಧವೂ ಪ್ರಕರಣ ದಾಖಲಾಗಿದೆ.  ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 204/2026ರಡಿ ಬಿಎನ್‌ಎಸ್ ಕಲಂ 281, 285 ಹಾಗೂ 106(1) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. 


ಸುದ್ದಿ ಓದಿ