20 ಲಕ್ಷ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

20 ಲಕ್ಷ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ
20 ಲಕ್ಷ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ಬೆಳಗಾವಿ02: ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಕೆ ಎಚ್ ಗ್ರಾಮದ ಸಿದ್ದೇಶ್ವರ ನಗರದಲ್ಲಿ ಮಹಾನಗರ ಪಾಲಿಕೆಯ 20 ಲಕ್ಷ ರೂ ವೆಚ್ಚದಲ್ಲಿ ಡ್ರೈನೇಜ್ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಚಾಲನೆ ನೀಡಿದರು. ಗ್ರಾಮಸ್ಥರು, ಮೃಣಾಲ ಹೆಬ್ಬಾಳಕರ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಭೂಮಿ ಪೂಜೆಯನ್ನು ನೆರವೇರಿಸಿದರು. ಕ್ಷೇತ್ರದಲ್ಲಿ ಪ್ರತಿನಿತ್ಯ ಒಂದಿಲ್ಲೊಂದು ಕಡೆ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗುತ್ತಿದ್ದು, ಇಡೀ ಕ್ಷೇತ್ರ ಅಭಿವೃದ್ಧಿಯತ್ತ ಸಾಗುತ್ತಿದೆ. ಕ್ಷೇತ್ರದ ಜನರ ಪ್ರೀತಿ ಮತ್ತು ಪ್ರೋತ್ಸಾಹವೇ ಇದಕ್ಕೆ ಕಾರಣ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.

ಸುದ್ದಿ ಓದಿ