ಬಳ್ಳಾರಿ

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

ಬಳ್ಳಾರಿ 12:ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಸೆ.14 ಮತ್ತು 15 ರಂದು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ (ಆರ್‌ಪಿಸಿ) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ್ ಒಳಗಿನ ಆವರಣವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರ ಮೇರೆಗೆ ನಿಬಂರ್ಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. 

ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್‌, ಇಂಟರ್‌ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.ಈ ಆದೇಶವು ಪರೀಕ್ಷಾ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ