ಬೆಳಗಾವಿ

ಮೂಡಲಗಿಯಲ್ಲಿ ಶ್ರೀ ಕಾರ್ಯಸಿದ್ಧಿ ಹನುಮಾನ್ ದೇವಸ್ಥಾನದ 21ನೇ ವಾರ್ಷಿಕೋತ್ಸವ

ಮೂಡಲಗಿಯಲ್ಲಿ ಶ್ರೀ ಕಾರ್ಯಸಿದ್ಧಿ ಹನುಮಾನ್ ದೇವಸ್ಥಾನದ 21ನೇ ವಾರ್ಷಿಕೋತ್ಸವ

ಲೋಕದರ್ಶನ ವರದಿ 

ಮೂಡಲಗಿ, ಅ. 10: ಪಟ್ಟಣದ ವಿದ್ಯಾನಗರದಲ್ಲಿರುವ ಶ್ರೀ ಕಾರ್ಯಸಿದ್ಧಿ ಹನುಮಾನ್ ದೇವಸ್ಥಾನದ 21ನೇ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರ, ನವೆಂಬರ್ 11ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಕುಂಭಮೇಳ, 11 ಗಂಟೆಗೆ ಕಳಸಾರೋಹಣ ಹಾಗೂ 11.30ಕ್ಕೆ ವಿಶೇಷ ಪೂಜಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಭಕ್ತರಿಗೆ ಅನ್ನಪ್ರಸಾದ ವಿತರಿಸಲಾಗುವುದು. ಸಂಜೆ 6 ಗಂಟೆಗೆ ಘಟಸ್ಥಾಪನಾ ಕಾರ್ಯಕ್ರಮ ಜರುಗಲಿದೆ. ದೇವಸ್ಥಾನದ 21ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯುವ ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಮಸ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಸಮಿತಿಯವರು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ. 


ಸುದ್ದಿ ಓದಿ