ಸಾಮೂಹಿಕ ನಮಾಜ್ ಮಾಡಿದ 24 ಮಂದಿ, ಮಸೀದಿಗೆ ನುಗ್ಗಿ ಗಲಾಟೆ ಮಾಡಿದ್ದ 22 ಮಂದಿಯ ಬಂಧನ
ಬೆಂಗಳೂರು, ಏ.6, ಲಾಕ್ ಡೌನ್ ಉಲ್ಲಂಘಿಸಿ ಸಾಮೂಹಿಕ ನಮಾಜ್ ಮಾಡುತ್ತಿದ್ದ 24 ಮಂದಿಯ ವಿರುದ್ಧ ಬೀದರ್‌ನ ಕಮಲನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಔರಾದ್ ತಾಲೂಕಿನ ಕಮಲನಗರದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಸಾಮೂಹಿಕ ನಮಾಜ್ ಮಾಡಲಾಗಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಕಮಲನಗರ ಪೊಲೀಸರು ನಮಾಜ್ ಮಾಡುತ್ತಿದ್ದ 24 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಲಾಕ್ ಡೌನ್ ಉಲ್ಲಂಘಿಸಿ ಸಾಮಾಹಿಕವಾಗಿ ನಮಾಜ್ ಮಾಡುವುದು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಧಾರ್ಮಿಕ ಕಾರ್ಯಕ್ರಮ ನಡೆಸುವವರ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮನೆಯಲ್ಲಿ ಲೈಟ್ ಆಫ್ ಮಾಡಿ ದೀಪ ಹಚ್ಚುವಂತೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಲೈಟ್ ಆಫ್ ಮಾಡದಿರುವುದಕ್ಕೆ ಮಸೀದಿಗೆ ನುಗ್ಗಿ ಗಲಾಟೆ ಮಾಡಿದ 22 ಮಂದಿಯನ್ನು ಘಟನೆ ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.ಹೊಸೂರು ಗ್ರಾಮದಲ್ಲಿ ನಿನ್ನೆ ರಾತ್ರಿ 9 ಗಂಟೆಗೆ ಮಸೀದಿಯಲ್ಲಿ ಲೈಟ್ ಆಫ್ ಮಾಡದ ಹಿನ್ನೆಲೆಯಲ್ಲಿ ಕೆಲ ದುಷ್ಕರ್ಮಿಗಳು ಮಸೀದಿಗೆ ನುಗ್ಗಿ ಗಲಾಟೆ ನಡೆಸಿದ್ದು, ಪೊಲೀಸರು 9 ಮಂದಿಯನ್ನು ಬಂಧಿಸಿದ್ದಾರೆ. ಇನ್ನು ನಿಪ್ಪಾಣಿ ತಾಲೂಕಿನ ಮಸೀದಿಯಲ್ಲೂ ಗಲಾಟೆ ನಡೆಸಿದ್ದ 13 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಯಮನಕರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 