27 ಮಾಜಿ ಸಚಿವರ ಭದ್ರತೆ ಹಿಂಪಡೆದ ರಾಜ್ಯ ಸರ್ಕಾರ
ಬೆಂಗಳೂರು, ಜ 30,ಮೈತ್ರಿ ಸರ್ಕಾರದಲ್ಲಿದ್ದ 27 ಮಾಜಿ ಸಚಿವರಿಗೆ ಒದಗಿಸಿದ್ದ ಅಂಗರಕ್ಷಕ ಭದ್ರತೆ ಹಾಗೂ ನಿವಾಸದ ಗಾರ್ಡ್ ಭದ್ರತೆಯನ್ನು ವಾಪಸ್ಸು ಪಡೆಯಬೇಕು ಎಂದು ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.
ಮಾಜಿ ಸಚಿವರಾದ ಆರ್.ವಿ ದೇಶಪಾಂಡೆ, ಬಂಡೆಪ್ಪ ಕಾಶಪ್ಪನವರ್, ಜಿ.ಟಿ.ದೇವೇಗೌಡ, ಡಿ ಸಿ ತಮ್ಮಣ್ಣ, ಕೃಷ್ಣ ಭೈರೇಗೌಡ, ಎಂ.ಸಿ. ಮನಗೂಳಿ, ಎನ್.ಎಚ್. ಶಿವಶಂಕರ ರೆಡ್ಡಿ, ಶ್ರೀನಿವಾಸ, ರಮೇಶ್ ಜಾರಕಿಹೋಳಿ, ಜಿ.ಟಿ ದೇವೆಗೌಡ, ವೆಂಕಟರಾವ್ ನಾಡಗೌಡ, ಪ್ರಿಯಾಂಕ್ ಖರ್ಗೆ , ಸಿ.ಎಸ್. ಪುಟ್ಟರಾಜು, ಯು.ಟಿ.ಖಾದರ್, ಸಾ.ರಾ.ಮಹೇಶ್, ಎನ್.ಮಹೇಶ್, ಶಿವಾನಂದ ಪಾಟೀಲ್, ವೆಂಕಟರಮಣಪ್ಪ, ರಾಜಶೇಖರ ಪಾಟೀಲ್, ಸಿ.ಪುಟ್ಟರಂಗ ಶೆಟ್ಟಿ, ಆರ್. ಶಂಕರ್, ಜಯಮಾಲಾ, ಬಿ.ಆರ್. ತಿಮ್ಮಾಪೂರ್, ತುಕಾರಾಂ ಇ., ರಹೀಂ ಖಾನ್, ಸತೀಶ್ ಜಾರಕಿಹೊಳಿ, ಪಿ.ಟಿ.ಪರಮೇಶ್ವರ್ ನಾಯಕ್, ಜಮೀರ್ ಅಹ್ಮದ್ ಸೇರಿ 27 ಮಂದಿ ಅಂಗರಕ್ಷಕ ಭದ್ರತೆಯನ್ನು ವಾಪಸ್ಸು ಪಡೆಯಲಾಗಿದೆ.
ಕಳೆದ ಜನವರಿ 21 ರಂದೇ ಆಯುಕ್ತರು, ಎ ಮತ್ತು ಬಿ ಶ್ರೇಣಿ ಎಂದು ವಿಭಾಗ ಮಾಡಿ ಭದ್ರತೆಯನ್ನು ವಾಪಸ್ಸು ಪಡೆದಿದ್ದಾರೆ. ಅಲ್ಲದೇ, ಎ ಶ್ರೇಣಿಯಲ್ಲಿರುವ ಮಾಜಿ ಸಚಿವರಾದ ಡಾ.ಜಿ ಪರಮೇಶ್ವರ, ಹೆಚ್ ಡಿ ರೇವಣ್ಣ, ಡಿಕೆ ಶಿವಕುಮಾರ, ಕೆ ಜೆ ಜಾರ್ಜ್ ಹಾಗೂ ಎಂ ಬಿ ಪಾಟೀಲ್ ಐದು ಮಂದಿಗೆ ಝಡ್ ಪ್ಲಸ್ ಶ್ರೇಣಿ ಮತ್ತು ಪೈಲಟ್ ಮುಂದುವರಿಸಲಾಗಿದೆ.ಮೈತ್ರಿ ಸರ್ಕಾರದಲ್ಲಿ ಗನ್ ಮ್ಯಾನ್ ಹಾಗೂ ಮನೆಗೆ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿತ್ತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 