ಅಂತರರಾಷ್ಟ್ರೀಯ

ಮೆಕ್ಸಿಕೋದಲಿ ಬಸ್ಸ್ ಕಂದಕಕ್ಕೆ ಉರುಳಿಬಿದ್ದು 27 ಮಂದಿ ದಾರುಣ ಸಾವು

ಮೆಕ್ಸಿಕೋದಲಿ ಬಸ್ಸ್ ಕಂದಕಕ್ಕೆ ಉರುಳಿಬಿದ್ದು 27 ಮಂದಿ ದಾರುಣ ಸಾವು

ಓಕ್ಸಾಕ 06: ಮೆಕ್ಸಿಕೋದಲ್ಲಿ ಪ್ರಯಾಣಿಕರ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಬಸ್ ಮಂಗಳವಾರ ರಾತ್ರಿ ರಾಜಧಾನಿ ಮೆಕ್ಸಿಕೋ ನಗರದಿಂದ ಸ್ಯಾಂಟಿಯಾಗೊ ಡಿ ಯೊಸೊಂಡುವಾಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. 

ಈ ಸಂದರ್ಭದಲ್ಲಿ ಚಾಲಕ ವಾಹನದ ಮೇಲಿನ ನಿಯಂತ್ರಣವನ್ನು ಕಳೆದುಕೊಂಡಿದ್ದು, ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ 27 ಮಂದಿ ಸಾವನ್ನಪ್ಪಿ, 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 17 ಮಂದಿಯ ಪೈಕಿ 6 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ..

 

ಸುದ್ದಿ ಓದಿ