ಕೊರೊನಾ ಸೋಂಕಿಗೆ ಚೀನಾದಲ್ಲಿ ಮತ್ತೆ 29 ಬಲಿ
ಬೀಜಿಂಗ್, ಫೆ 27 ; ಚೀನಾದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಕೊರೊನಾ ವೈರಾಣು ಸೋಂಕಿಗೆ ಮತ್ತೆ 29 ಜನರು ಬಲಿಯಾಗಿದ್ದು ಕಳೆದ 24 ಗಂಟೆಗಳಲ್ಲಿ 433 ಹೊಸ ದೃಢಪಟ್ಟ ಪ್ರಕರಣಗಳು ದಾಖಲಾಗಿವೆ ಎಂದು ಚೀನಾ ಆರೋಗ್ಯ ಪ್ರಾಧಿಕಾರ ಗುರುವಾರ ತಿಳಿಸಿದೆ. ಸೋಂಕಿಗೆ ಬಲಿಯಾದವರ ಸಂಖ್ಯೆ ಕಳೆದೊಂದು ದಿನದಲ್ಲಿ ಹುಬೈ ಪ್ರಾಂತ್ಯದಲ್ಲಿ 26 ರಷ್ಟಿದ್ದು ಬೀಜಿಂಗ್, ಹಿಲಾಂಗ್ಜಾಂಗ್ ಮತ್ತು ಹೆನಾನ್ ಗಳಲ್ಲಿ ತಲಾ ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಪ್ರಾಧಿಕಾರ ತಿಳಿಸಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಕೊರೊನಾ ವೈರಾಣು ಸೋಂಕು ಮೊದಲ ಬಾರಿಗೆ ಚೀನಾದ ವುಹಾನ್ ನಲ್ಲಿ ಕಾಣಿಸಿಕೊಂಡಿತು. ಇದೀಗ 25 ಕ್ಕೂ ಹೆಚ್ಚು ದೇಶಗಳಿಗೆ ಹರಡಿದೆ. ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯು ಎಚ್ ಒ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 