2ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳ
2nd State Level Kannada Literary Conference
ಹಾವೇರಿ 01: ಜಿಲ್ಲೆಯ ಎಲ್ಲ ಕನ್ನಡಪರ ಮನಸ್ಸುಗಳನ್ನು ಒಗ್ಗೂಡಿಸಿಕೊಂಡು ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗ(ರಿ)ಬೆಂಗಳೂರು ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸಾಹಿತಿಗಳಾದ ಜಿ.ಎಂ.ಓಂಕಾರಣ್ಣನವರ ಸಮ್ಮೇಳನಾಧ್ಯಕ್ಷತೆಯಲ್ಲಿ ಜರುಗಿದ 2ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಸಹಕಾರ ನೀಡಿದ ಸರ್ವರಿಗೂ ಅಭಿನಂದನೆಗಳನ್ನು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ಯ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಅವರು ತಿಳಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ವತಿಯಿಂದ ಸಮ್ಮೇಳನ ಯಶಸ್ವಿಗೊಳಿದ ಗಣ್ಯರಿಗೆ ಗೌರವ-ಸನ್ಮಾನ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನ್ನಡ ನೆಲ, ಜಲ ಹಾಗೂ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವ ಬೆಳೆಸುವ ಕೆಲಸ ಮಾಡುತ್ತಿರುವ ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗ(ರಿ) ನಿರಂತರ ಕೆಲಸ ಮಾಡುತ್ತಿದೆ. 2ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಜರುಗಲು ಹಾವೇರಿ ಹಾಗೂ ರಾಜ್ಯದ ಜನತೆ ಸಹಕಾರ ನೀಡಿದ್ದು, ರಾಜ್ಯಾಧ್ಯಕ್ಷರಾದ ಎಸ್.ಡಿ.ಮುಡೆಣ್ಣನವರ ಅವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶ್ರಮಹಿಸಿದ್ದಾರೆ ಅವರ ಸೇವೆ ಅಪಾರವಾಗಿದೆ.ವಿವಿಧ ಕ್ಷೇತ್ರದಲ್ಲಿ ಸೇವೆ ಮಾಡಿದ ರಾಜ್ಯ ಮಟ್ಟದ ಕರುನಾಡ ಹೋರಾಟ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಪ್ರೋತ್ಸಾಹವನ್ನು ನೀಡಿದ್ದಾರೆ. ಕನ್ನಡ ಕಟ್ಟುವ ಕೆಲಸಕ್ಕೆ ಎಲ್ಲರೂ ಬೆಂಬಲಿಸೋಣ ಎಂದು ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಅವರು ಹೇಳಿದರು.
2ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷತೆವಹಿಸಿದ ಸಾಹಿತಿಗಳಾದ ಜಿ.ಎಂ.ಓಂಕಾರಣ್ಣನವರ ಅವರಿಗೆ ಹಾಗೂ ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗ(ರಿ)ದ ರಾಜ್ಯಾಧ್ಯಕ್ಷರಾದ ಎಸ್.ಡಿ.ಮುಡೆಣ್ಣನವರ ಅವರಿಗೆ ಹಾವೇರಿ ಜಿಲ್ಲೆಯ ಜನತೆಯ ಪರವಾಗಿ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷರಾದ ಮಂಜಪ್ಪ ಮರೋಳ,ಡಿಎಸ್ಎಸ್ ಸಂಚಾಲಕರಾದ ಮಾಲತೇಶ ಯಲ್ಲಾಪುರ,ರೈತ ಮುಖಂಡರಾದ ಸುರೇಶ ಛಲವಾದಿ,ಸುಭಾಸ ಚವ್ಹಾಣ,ಶಂಕರ ಮೆಹರವಾಡೆ,ನಾಗರಾಜ ಹರಿಜನ,ಅಲೆಮಾರಿ ಸಮಾಜದ ಅಧ್ಯಕ್ಷರಾದ ಶೆಟ್ಟಿ ವಿಭೂತಿ ಮುಖಂಡರಾದ ವೆಂಕಟೇಶ ವಿಜಾಪುರ,ಎಮ್ ಕೆ ಮಖಬೂಲ,ಶಂಭು ಕಳಸದ, ಶ್ರೀಮತಿ ನೀಲಮ್ಮ ಪೂಜಾರ,ಜಗದೀಶ ಹರಿಜನ,ಮಹೇಶಪ್ಪ ಹರಿಜನ,ಅರುಣ ಮುಂದಿನಮನಿ,ವಿನಯ ಮಾಳಗಿ,ಚೇತನ ಓಲೇಕಾರ,ಮೇಘರಾಜ ಹರಿಜನ,ಗುಡ್ಡಪ್ಪ ಆರಿಕಟ್ಟಿ,ವಿನಯಕುಮಾರ,ಮಹಮ್ಮದ ದೇವಿಹೊಸೂರ ಸೇರಿದಂತೆ ಅನೇಕರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 