ದಾಖಲೆ ಇಲ್ಲದ 3.39ಲಕ್ಷ ರೂ. ವಶಕ್ಕೆ
ಲೋಕದರ್ಶನ ವರದಿ
ಮುಂಡಗೋಡ:ತಾಲೂಕಿನ ಅಗಡಿ ಚೆಕ್ ಪೋಸ್ಟ್ನಲ್ಲಿ ದಾಖಲೆ ಇಲ್ಲದ 3.39ಲಕ್ಷ ರೂ. ಹಣವನ್ನು ಅಧಿಕಾರಿಗಳ ತಂಡದವರು ಶುಕ್ರವಾರ ತಪಾಸಣೆ ವೇಳೆ ವಶಕ್ಕೆ ಪಡೆದಿದ್ದಾರೆ.
ಪಟ್ಟಣದ ಹಸನ್ಸಾಬ್ ಎಂಬುವರು ತಮ್ಮ ಸ್ಕೂಟಿಯಲ್ಲಿ 3.39ಲಕ್ಷ ರೂ. ಹಣವನ್ನು ತೆಗೆದುಕೊಂಡು ಹುಬ್ಬಳ್ಳಿಯಿಂದ ಮುಂಡಗೋಡಕ್ಕೆ ಬರುತ್ತಿದ್ದ ವೇಳೆ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಅಗಡಿ ಚೆಕ್ ಪೋಸ್ಟ್ನಲ್ಲಿ ತಪಾಸಣೆ ನಡೆಸಿದಾಗ ಯಾವುದೆ ದಾಖಲೆ ಇಲ್ಲದ ಕಾರಣ 3.39ಲಕ್ಷ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಇಲ್ಲಿನ ಸಿಪಿಐ ಎಸ್.ಎಸ್.ಸಿಮಾನಿ ಹಾಗೂ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.