3.87 ಲಕ್ಷ ನಗದು, 69.09 ಲೀ. ಮದ್ಯ ವಶ: ಡಿಸಿ ಮಾಲಪಾಟಿ ಮಾಹಿತಿ
ಮಾದರಿ ನೀತಿ ಸಂಹಿತೆ ಉಲ್ಲಂಘನೆ
ಬಳ್ಳಾರಿ25: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ರ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಫ್ಎಸ್ಟಿ, ಎಸ್ಎಸ್ಟಿ, ಪೊಲೀಸ್ ಮತ್ತು ಅಬಕಾರಿ ಇಲಾಖೆಯಿಂದ ಕಾರ್ಯಾಚರಣೆ ಮುಂದುವರೆದಿದ್ದು, ಸೋಮವಾರದಂದು 3,87,450 ರೂ. ಲಕ್ಷ ನಗದು ಹಣ ಮತ್ತು 31,087 ರೂ. ಮೌಲ್ಯದ 69.09 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
ಅಬಕಾರಿ ಇಲಾಖೆಯಿಂದ 21,633 ರೂ. ಮೌಲ್ಯದ 47.22 ಲೀಟರ್ ಮದ್ಯ ಮತ್ತು ಪೊಲೀಸ್ ಇಲಾಖೆಯಿಂದ 9,454 ರೂ. ಮೌಲ್ಯದ 21.87 ಲೀಟರ್ ಮದ್ಯ ಸೇರಿ ಒಟ್ಟು 31,087 ರೂ. ಮೌಲ್ಯದ 69.09 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿರುಗುಪ್ಪ ರಸ್ತೆಯ ಕ್ಲಾಸಿಕ್ ಫಂಕ್ಷನ್ ಹಾಲ್ ಬಳಿಯಿರುವ ಚೆಕ್ಪೋಸ್ಟ್ನಲ್ಲಿ ಎಸ್ಎಸ್ಟಿ ತಂಡವು ತಪಾಸಣೆ ವೇಳೆ 3,87,450 ರೂ. ಲಕ್ಷ ನಗದು ಹಣವನ್ನು ವಶಪಡಿಸಿಕೊಂಡಿದ್ದು, ಪರೀಶೀಲನೆಗಾಗಿ ಸಮಿತಿಯ ಮುಂದೆ ಹಾಜರುಪಡಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಒಟ್ಟು 43 ಫ್ಲೈಯಿಂಗ್ ಸ್ಕಾ-್ವಡ್, 27 ಎಸ್ಎಸ್ಟಿ ತಂಡ ಹಾಗೂ 7 ಅಬಕಾರಿ ತಂಡಗಳು ಈಗಾಗಲೇ ಕಾರ್ಯಪ್ರವೃತ್ತವಾಗಿ ತಪಾಸಣೆ ನಡೆಸುತ್ತಿವೆ ಎಂದು ಅವರು ತಿಳಿಸಿದ್ದಾರೆ.
-------
ಪಂಜಿನ ಮೆರವಣಿಗೆ ಮೂಲಕ ಮತದಾನ ಜಾಗೃತಿ
ಬಲಿಷ್ಠ ಪ್ರಜಾಪ್ರಭುತ್ವಕ್ಕೆ ತಪ್ಪದೇ ಎಲ್ಲರೂ ಮತದಾನ ಮಾಡಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು
ಬಳ್ಳಾರಿ: ಮತದಾನ ಎಲ್ಲರಿಗೂ ದೊರೆತಿರುವ ಸಾಂವಿಧಾನಿಕ ಹಕ್ಕಾಗಿದ್ದು, ಬಲಿಷ್ಠ ಪ್ರಜಾಪ್ರಭುತ್ವಕ್ಕೆ ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಹೇಳಿದರು.
ಚುನಾವಣಾ ಆಯೋಗ, ಜಿಲ್ಲಾ ಚುನಾವಣಾಧಿಕಾರಿಗಳು, ಜಿಲ್ಲಾ ಪಂಚಾಯತ್, ಹಾಗೂ ತಾಲೂಕು ಆಡಳಿತ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಸೋಮವಾರ ಮತದಾನ ಜಾಗೃತಿ ಮೂಡಿಸುವ ಅಂಗವಾಗಿ ನಗರದ ಬೆಳಗಲ್ ಕ್ರಾಸ್ನಿಂದ ಹಮ್ಮಿಕೊಂಡಿದ್ದ ಪಂಜಿನ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ಹಬ್ಬವಾದ ಮತದಾನದಲ್ಲಿ ಎಲ್ಲರೂ ಭಾಗಿಯಾಗಬೇಕು. ಯಾವುದೇ ಆಮಿಷಕ್ಕೆ ಒಳಗಾಗದೇ ಎಲ್ಲರೂ ಮತ ಚಲಾಯಿಸಬೇಕು. ಯಾರೂ ಮತದಾನದಿಂದ ತಪ್ಪಿಸಬಾರದು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಮತದಾನ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಮತದಾನ ಜಾಗೃತಿ ಮೂಡಿಸುವ ಅಂಗವಾಗಿ ಹಮ್ಮಿಕೊಂಡಿದ್ದ ಪಂಜಿನ ಮೆರವಣಿಗೆಯು ನಗರದ ಬೆಳಗಲ್ ಕ್ರಾಸ್ನಿಂದ ಆರಂಭವಾಗಿ ಕೌಲ್ಬಜಾರ್ ಮೂಲಕ ಮೊದಲನೇ ರೈಲ್ವೇ ಗೇಟ್ ಬಳಿ ಮುಕ್ತಾಯವಾಗಿತು. ಪಂಜಿನ ಮೆರವಣಿಗೆಯಲ್ಲಿ ಓಟ್ ಮಾಡಿದವನೇ ಹೀರೋ, ನಿಮ್ಮ ಮತ - ನಿಮ್ಮ ಭವಿಷ್ಯ, ಜನ ಸಾಮಾನ್ಯರ ಶಕ್ತಿ ಮತ ಚಲಾವಣೆ, ಮತದಾನ ಮಾಡಿದವನೇ ಶೂರ, ಪ್ರಜಾಪ್ರಭುತ್ವ ನಮ್ಮಿಂದ ಮತದಾನ ಹೆಮ್ಮೆಯಿಂದ ಎನ್ನುವ ಮತದಾನ ಜಾಗೃತಿ ಮೂಡಿಸುವ ಮಾಹಿತಿ ಫಲಕಗಳು ಸಾರ್ವಜನಿಕರ ಗಮನ ಸೆಳೆದವು.
ಈ ಸಂದರ್ಭದಲ್ಲಿ ಜಿಪಂ ಯೋಜನಾ ನಿರ್ದೇಶಕ ಪ್ರಮೋದ್ ಸೇರಿದಂತೆ ಬಳ್ಳಾರಿ ತಾಲೂಕಿನ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
---------
ಜಿಲ್ಲಾಡಳಿತದಿಂದ ಜಗದ್ಗುರು ಶಂಕರಾಚಾರ್ಯರ ಜಯಂತಿ ಆಚರಣೆ
ಬಳ್ಳಾರಿ25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಂಸ್ಕೃತಿಕ ಸಮುಚ್ಚಯ ಸಭಾಂಗಣದಲ್ಲಿ ಮಂಗಳವಾರ ಆದಿಗುರು ಶಂಕರಾಚಾರ್ಯರ ಜಯಂತಿಯನ್ನು ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಆರ್.ಸುರೇಶಬಾಬು ಅವರು, ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿ, ವಿಶ್ವ ತತ್ವಜ್ಞಾನಕ್ಕೆ ಶಂಕರಾಚಾರ್ಯರು ನೀಡಿದ ಕೊಡುಗೆಯನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಬ್ರಾಹ್ಮಣ ಒಕ್ಕೂಟದ ಉಪಾಧ್ಯಕ್ಷ ಡಾ.ಶ್ರೀನಾಥ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ಡಣಾಪುರ, ಮಾಜಿ ನಗರಸಭಾ ಸದಸ್ಯ ಆರ್.ಎನ್.ರಘುನಾಥ, ಶ್ರೀ ಶಂಕರ ಮಠದ ಮುರಾರಿ. ಹೆಚ್.ಕೆ, ಜಿ.ಮಂಜುನಾಥ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಇನ್ನಿತರರು ಉಪಸ್ಥಿತರಿದ್ದರು.
ಕಂಪ್ಲಿ ವಿಧಾನಸಭಾ ಚುನಾವಣೆ:
ಚುನಾವಣಾ ಅಭ್ಯರ್ಥಿಗಳ ವೆಚ್ಚದ ಲೆಕ್ಕಪತ್ರಗಳ ಪರೀಶೀಲನೆಗೆ ದಿನ ನಿಗದಿ
ಬಳ್ಳಾರಿ25: ಕಂಪ್ಲಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಭ್ಯರ್ಥಿಗಳ ತಮ್ಮ ಚುನಾವಣಾ ವೆಚ್ಚಗಳ ಲೆಕ್ಕಪತ್ರಗಳನ್ನು ಚುನಾವಣಾ ವೆಚ್ಚ ವೀಕ್ಷಕರ ಪರೀಶೀಲನೆಗೆ ಮೂರು ಬಾರಿ ಹಾಜರುಪಡಿಸಲು ದಿನ ನಿಗದಿಪಡಿಸಲಾಗಿದೆ.
*ನಿಗದಿಪಡಿಸಿದ ದಿನ ವಿವರ:* ಮೊದಲನೇ ಪರೀಶೀಲನೆಯು ಏ.29 ರಂದು ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ, ಎರಡನೇ ಪರೀಶೀಲನೆಯು ಮೇ 3 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಹಾಗೂ ಮೂರನೇ ಪರೀಶೀಲನೆಯು ಮೇ 7 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಅನಂತಪುರ ರಸ್ತೆಯ ಲೋಕೋಪಯೋಗಿ ಇಲಾಖೆಯ ನೂತನ ಸರ್ಕಾರಿ ಅತಿಥಿ ಗೃಹದಲ್ಲಿ ಲೆಕ್ಕ ಪತ್ರಗಳ ಪರೀಶೀಲನೆ ನಡೆಸಲಾಗುವುದು ಎಂದು 91-ಕಂಪ್ಲಿ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಡಾ.ನಯನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಅಥಿತಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
ಬಳ್ಳಾರಿ25: ಅಲ್ಲಿಪುರದ ಬಿಐಟಿಎಂ ಕಾಲೇಜು ಹತ್ತಿರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಸಿಬಿಎಸ್ಸಿ)ಯಲ್ಲಿ ಖಾಲಿ ಇರುವ ಗಣಿತ, ವಿಜ್ಞಾನ ಮತ್ತು ಇಂಗ್ಲೀಷ್ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರ ನೇಮಕಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಸಿಬಿಎಸ್ಸಿ)ಯ ಪ್ರಾಂಶುಪಾಲರ ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 14 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಲಿಪುರದ ಬಿಐಟಿಎಂ ಕಾಲೇಜು ಹತ್ತಿರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ(ಸಿಬಿಎಸ್ಸಿ)ಯ ಪ್ರಾಂಶುಪಾಲರ ಕಚೇರಿ ಅವರ ಮೊ.7353346069 ಅಥವಾ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅವರ ದೂ.08392-200125 ಗೆ ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಸಿರುಗುಪ್ಪ ವಿಧಾನಸಭಾ ಚುನಾವಣೆ:
ಚುನಾವಣಾ ಅಭ್ಯರ್ಥಿಗಳ ವೆಚ್ಚದ ಲೆಕ್ಕಪತ್ರಗಳ ಪರೀಶೀಲನೆಗೆ ದಿನ ನಿಗದಿ
ಬಳ್ಳಾರಿ 25:ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಭ್ಯರ್ಥಿಗಳ ತಮ್ಮ ಚುನಾವಣಾ ವೆಚ್ಚಗಳ ಲೆಕ್ಕಪತ್ರಗಳನ್ನು ಚುನಾವಣಾ ವೆಚ್ಚ ವೀಕ್ಷಕರ ಪರೀಶೀಲನೆಗೆ ಮೂರು ಬಾರಿ ಹಾಜರುಪಡಿಸಲು ಚುನಾವಣಾ ಆಯೋಗದ ನಿರ್ದೇಶನವಿದ್ದು, ಇದಕ್ಕಾಗಿ ದಿನ ನಿಗದಿಪಡಿಸಲಾಗಿದೆ.
*ನಿಗದಿಪಡಿಸಿದ ದಿನ ವಿವರ:* ಮೊದಲನೇ ಪರೀಶೀಲನೆಯು ಏ.29 ರಂದು ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ, ಎರಡನೇ ಪರೀಶೀಲನೆಯು ಮೇ 3 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಹಾಗೂ ಮೂರನೇ ಪರೀಶೀಲನೆಯು ಮೇ 7 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಅನಂತಪುರ ರಸ್ತೆಯ ಲೋಕೋಪಯೋಗಿ ಇಲಾಖೆಯ ನೂತನ ಸರ್ಕಾರಿ ಅತಿಥಿ ಗೃಹದಲ್ಲಿ ನಡೆಸಲಾಗುವುದು ಎಂದು 92-ಸಿರುಗುಪ್ಪ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಸತೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.