ಅಕ್ರಮವಾಗಿ ಸಾಗಿಸುತ್ತಿದ್ದ 3.88 ಲಕ್ಷ ನಗದು ಹಣ ವಶಕ್ಕೆ : ಹುಕ್ಕೇರಿ ತಾಲೂಕಿನ ಬೈರಾಪೂರ ಚೆಕ್ ಪೋಸ್ಟ್ ನಲ್ಲಿ ಪತ್ತೆ
ಬೆಳಗಾವಿ : ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ 3,88,500 ನಗದು ಹಣವನ್ನು ಎಫ್ ಎಸ್ ಟಿ ಅಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೈರಾಪುರ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.
ಕೊಲ್ಲಾಪುರದ ಜಮಾದಾರ ಎನ್ನುವ ವ್ಯಕ್ತಿಯು 3,88500 ನಗದು ಹಣವನ್ನು ಸಾಗಾಟ ಮಾಡುತ್ತಿದ್ದ ವೇಳೆಯಲ್ಲಿ ಬೈರಾಪೂರ ಚೆಕ್ ಪೋಸ್ಟ್ ನಲ್ಲಿ ತಪಾಸನೆ ನಡೆಸುತ್ತಿದ್ದ ಎಫ್ ಎಸ್ ಟಿ ಅಧಿಕಾರಿಗಳು ಹಾಗೂ ಪೊಲೀಸರು ಈ ವೇಳೆ ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಸಂಕೇಶ್ವರ ಸಿಪಿಐ ಪ್ರಹ್ಲಾದ ಚೆನ್ನಗೇರಿ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಕುರಿತು ಸಂಕೇಶ್ವರ ಪೊಲೀಸ ಠಾಣೆಯಲ್ಲಿ ಸಿಆರ್ ನಂ- 103/23 ಯು/ಎಸ್ 98 ಕೆಪಿ ಆಕ್ಟ್ ಪ್ರಕಾರ ಪ್ರಕರಣ ದಾಖಲು ಮಾಡಲಾಗಿದೆ.