ಮಂಡ್ಯ 26: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಮಂಡ್ಯದಲ್ಲಿ ಸೋಮವಾರ ನಡೆದಿದೆ.
ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಮದ್ದೂರು ತಾಲ್ಲೂಕಿನ ಗೊರವನಹಳ್ಳಿಗೆ ಸೇರಿದ ಅಶೋಕ್ ಮತ್ತು ವಾಣಿ ದಂಪತಿ, ತಮ್ಮ ಮಗಳು 3 ವರ್ಷದ ಹೃತೀಕ್ಷಗೆ ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ದಂಪತಿ ಮತ್ತು ಮಗು ಪ್ರಯಾಣಿಸುತ್ತಿದ್ದ ಬೈಕ್ ಅನ್ನು ಪೊಲೀಸರು ದಿಢೀರ್ ಅಡ್ಡಗಟ್ಟಿದ ಪರಿಣಾಮ ಹಿಂಬದಿ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಗು ಕೆಳಗೆ ಬಿದ್ದಿದ್ದು, ಹಿಂದಿನಿಂದ ಬಂದ ಇನ್ನೊಂದು ಟೆಂಪೋ ಮಗು ಮೇಲೆ ಹರಿದಿದೆ ಪರಿಣಾಮ ಗಂಭೀರ ಪೆಟ್ಟಾಗಿ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.
ಮಗುವಿನ ಸಾವಿಗೆ ಪೊಲೀಸರ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮಗುವಿನ ಮೃತದೇಹವನ್ನು ರಸ್ತೆ ಮಧ್ಯೆ ಇಟ್ಟು ಪೊಷಕರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.
ಇನ್ನು ಈ ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್ಐಗಳಾದ ಜಯರಾಮ್, ನಾಗರಾಜ್, ಗುರುದೇವ್ ಅಮಾನತುಗೊಂಡವರಾಗಿದ್ದಾರೆ. ಅಮಾನತು ಮಾಡಲಾಗಿದೆ. ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಲ್ಮೆಟ್ ತಪಾಸಣೆ ಮಾಡುತ್ತಿದ್ದ ಮೂವರು ಎಎಸ್ಐಗಳನ್ನು ಅಮಾನತು ಮಾಡಿದ್ದಾರೆ.