ಎನ್‌ಕೌಂಟರ್‌ನಲ್ಲಿ 31 ನಕ್ಸಲರು ಹತ: ಇಬ್ಬರು ಸಿಬ್ಬಂದಿಯೂ ಸಾವು
31 Naxals killed in encounter: Two personnel also killed
ಬಿಜಾಪುರ 09: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಎಡಪಂಥೀಯ ತೀವ್ರಗಾಮಿ ಹೋರಾಟಗಾರರ ವಿರುದ್ಧ ನಡೆಸಿದ ಕಾರ್ಯಾಚರಣೆ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ 31 ನಕ್ಸಲರು ಹತರಾಗಿದ್ದಾರೆ, ವಿಶೇಷ ಕಾರ್ಯಪಡೆಯ ಇಬ್ಬರು ಸಿಬ್ಬಂದಿಯೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಬೆಳಿಗ್ಗೆ ಇಂದ್ರಾವತಿ ನ್ಯಾಷನಲ್ ಪಾರ್ಕ್ ಸಮೀಪದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲ್ ನಿಗ್ರಹ ಪಡೆ ನಡೆಸಿದ ಜಂಟಿ ಕಾರ್ಯಾಚರಣೆ ಇದಾಗಿದೆ ಎಂದು ಬಸ್ತಾರ್ ವಲಯದ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಸುಂದರ್ ರಾಜ್ ಪಿ. ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಹೆಚ್ಚಿನ ಪಡೆಗಳನ್ನು ಕರೆಸಿಕೊಳ್ಳಲಾಗಿದ್ದು, ಶೋಧ ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ಈ ವರ್ಷ ಸಾವಿಗೀಡಾದ ಒಟ್ಟು 81 ನಕ್ಸಲರಲ್ಲಿ, 65 ಮಂದಿಯನ್ನು ಬಸ್ತಾರ್ ವಲಯದಲ್ಲೇ ಕೊಲ್ಲಲಾಗಿದೆ.
ಘಟನಾ ಸ್ಥಳದಿಂದ ಭಾರಿ ಪ್ರಮಾಣದ ಆಯುಧಗಳು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 