31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ
ಖಾನಾಪುರ: ಇತ್ತಿಚಿನ ದಿನಗಳಲ್ಲಿ ಯುವಜನತೆ ವಾಹನಗಳನ್ನು ಚಲಾಯಿಸುವಾಗ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಿದರೆ ರಸ್ತೆ ಮೇಲೆ ಆಗುವ ಅನಾಹುತಗಳನ್ನು ತಡೆಗಟ್ಟಬಗಹುದೆಂದು ನಂದಗಡ ಠಾಣೆಯ ಪಿ.ಎಸ್.ಐ ಈರಣ್ಣಾ ರಿತ್ತಿ ಹೇಳಿದರು.
ತಾಲೂಕಿನ ಬೀಡಿ ಗ್ರಾಮದ ನೆಹರೂ ಮೆಮೊರಿಯಲ್ ಕಾಲೇಜಿನಲ್ಲಿ ನಂದಗಡ ಪೋಲಿಸ್ ಠಾಣೆ ವತಿಯಿಂದ ಹಮ್ಮಿಕೊಂಡಂತಹ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
` ಯುವಜನತೆ ಹೆಚ್ಚಿನ ಪ್ರಮಾಣದಲ್ಲಿ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನ ಹಾಳು ಮಾಡಿಕೊಂಡು, ಕುಟುಂಬಸ್ಥರಿಗೆ ಕಷ್ಟ ಭಾರವಾಗುತ್ತಿದ್ದಾರೆ. ಜೋತೆಗೆ ಮದ್ಯಪಾನ ಸೇವಿಸಿ ಹಾಗೂ ವಾಹನ ಕಂಟ್ರೋಲ್ ಆಗದ ರೀತಿ ವಾಹನ ಚಲಾವಣೆ ಮಾಡುವುದರಿಂದ ಹೆಚ್ಚಿನ ರಸ್ತೆ ಅಪಘಾತಗಳು ಆಗುತ್ತಿವೆ. ಆದಷ್ಟೂ ಇಂತಹ ಚಟುವಟಿಕೆಗಳಿಂದ ಆದಷ್ಟೂ ದೂರವಿರಬೇಕೆಂದು ಕರೆ ನೀಡಿದರು. ಈ ಸಂಧರ್ಭದಲ್ಲಿ ಬೀಡಿ ನೆಹರೂ ಮೆಮೊರಿಯಲ್ ಕಾಲೇಜಿನ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 