ಜು.21 ರಂದು ಪಂ. ಬಸವರಾಜ ರಾಜಗುರು ಅವರ 35ನೇ ಪುಣ್ಯಸ್ಮರಣೆ
35th death anniversary of Pt. Basavaraja Rajaguru on July 21
ಧಾರವಾಡ 17: ಸ್ವರಸಾಮ್ರಾಟ್, ಪದ್ಮಭೂಷಣ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ (ರಿ.) ಟ್ರಸ್ಟ್ ವತಿಯಿಂದ ಪಂ. ಬಸವರಾಜ ರಾಜಗುರು ಅವರ 35ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಜುಲೈ 21, 2026ರಂದು ಬೆಳಿಗ್ಗೆ 9.30ಕ್ಕೆ ಧಾರವಾಡದ ಹೊಸಯಲ್ಲಾಪುರದಲ್ಲಿರುವ ಅವರ ಸಮಾಧಿ ಸ್ಥಳದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಂಗವಾಗಿ ಪೂಜೆ, ಪುಷ್ಪನಮನ ಹಾಗೂ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.
ಕಾರ್ಯಕ್ರಮದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ್, ಭಾರತಿದೇವಿ ರಾಜಗುರು, ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಮನಸೂರು, ಟ್ರಸ್ಟ್ ಅಧ್ಯಕ್ಷ ಪಂ. ಎಂ. ವೆಂಕಟೇಶಕುಮಾರ್, ಟ್ರಸ್ಟಿ ಪಂ. ಕೈವಲ್ಯಕುಮಾರ್ ಗುರವ್, ಟ್ರಸ್ಟ್ ಸಮಿತಿಯ ಸದಸ್ಯರು, ಗಣ್ಯರು, ಕಲಾವಿದರು ಹಾಗೂ ಪಂ. ಬಸವರಾಜ ರಾಜಗುರು ಅವರ ಶಿಷ್ಯರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅನುರಾಗ ಸಂಗೀತ ಬಳಗದಿಂದ ‘ಸಂಗೀತ ನಮನ’ ಕಾರ್ಯಕ್ರಮವೂ ಜರುಗಲಿದೆ ಎಂದು ಟ್ರಸ್ಟ್ನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 