ಉದ್ಯೋಗ ಖಾತರಿ ಯೋಜನೆಯಡಿ ಏಪ್ರಿಲ್ 1 ರಿಂದ ಒಂದು ದಿನಕ್ಕೆ 370 ಕೂಲಿ ಜಾರಿಗೆ
370 per day wage to be implemented from April 1 under the employment guarantee scheme
ಉದ್ಯೋಗ ಖಾತರಿ ಯೋಜನೆಯಡಿ ಏಪ್ರಿಲ್ 1 ರಿಂದ ಒಂದು ದಿನಕ್ಕೆ 370 ಕೂಲಿ ಜಾರಿಗೆ
ಹಾವೇರಿ 04 : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಏಪ್ರಿಲ್ 1 ರಿಂದ ಒಂದು ದಿನಕ್ಕೆ 370 ಕೂಲಿ ನಿಗದಿಪಡಿಸಲಾಗಿದೆ. ಈ ’ಯೋಜನೆಯಡಿ ಅರ್ಹ ನೋಂದಾಯಿತ ಕುಟುಂಬಗಳಿಗೆ ಕೇಂದ್ರ ಸರ್ಕಾರವು 349 ರಿಂದ 370ಕ್ಕೆ ಕೂಲಿ ದರ ಹೆಚ್ಚಿಸಿದೆ. ತಾಲೂಕಿನ ಎಲ್ಲಾ ಗ್ರಾಮದ ಅರ್ಹ ನೋಂದಾಯಿತ ಕೂಲಿ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ ಎಂದು ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನವೀನ್ ಪ್ರಸಾದ್ ಕಟ್ಟಿಮನಿ ತಿಳಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಕರ್ಯ ಒದಗಿಸುವುದು, ನೈಸರ್ಗಿಕ ಸಂಪನ್ಮೂಲ ಬಲ ಪಡಿಸುವುದು, ವಲಸೆ ತಡೆಗಟ್ಟುವುದು, ಆರ್ಥಿಕ ಭದ್ರತೆ ಒದಗಿಸುವುದು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ನೈಸರ್ಗಿಕ ಸಂಪನ್ಮೂಲ ನಿರ್ವಹಣಾ ಕಾಮಗಾರಿಗಳಿಗೆ ಆದ್ಯತೆಯನ್ನು ನೀಡಲಾಗಿದ್ದು, ಜನರಿಗೆ ಕೆರೆ, ಹಳ್ಳ, ಕಾಲುವೆ ಹುಳೆತ್ತುವುದು, ಅಮೃತ ಸರೋವರ ಹಾಗೂ ಜಲ ಸಂಜೀವಿನಿ ಕಾಮಗಾರಿಗಳಾದ ಕೃಷಿ ಹೊಂಡ, ಬದು ನಿರ್ಮಾಣ, ಕೊಳವೆ ಬಾವಿ ನಾಲಾ ಅಭಿವೃದ್ಧಿ, ಅರಣೀಕರಣ ಹೀಗೆ ಹಲವು ಕಾಮಗಾರಿಗಳನ್ನು ಕೂಲಿ ಕಾರ್ಮಿಕರು ಮಾಡಬಹುದು ಎಂದು ತಿಳಿಸಿದ್ದಾರೆ. ಬೇಸಿಗೆ ಕಾಲದಲ್ಲಿ ಕೂಲಿ ಕಾರ್ಮಿಕರು ಉದ್ಯೋಗ ಅರಸಿ ಗುಳೆ ಹೋಗುವುದನ್ನು ಬಿಟ್ಟು, ನಿಮ್ಮ ಸ್ವಂತ ಊರಿನಲ್ಲಿಯೇ ಉದ್ಯೋಗ ಖಾತರಿಯೋಜನೆಯಡಿ ಕೆಲಸ ಮಾಡಿ ನೆಮ್ಮದಿಯ ಜೀವನ ನಡೆಸುವುದರ ಜತೆಗೆ ಆರ್ಥಿಕವಾಗಿ ಸಬಲರಾಗಬೇಕು. ತಾಲೂಕಿನ ಕೂಲಿ ಕಾರ್ಮಿಕರು ಕೂಲಿ ಬೇಡಿಕೆಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದುಕೊಂಡು ಈ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 