ದೇಶದಲ್ಲಿ 38,164 ಹೊಸ ಕೊರೋನ ಪ್ರಕರಣ, 499 ಸಾವು
ನವದೆಹಲಿ, ಜಲೈ 19 ದೇಶದಲ್ಲಿ ಕಳದೆ 24 ಗಂಟೆಗಳಯಲ್ಲಿ ಹೊಸದಾಗಿ 38,164 ಮಂದಿಗೆ ಹೊಸದಾಗಿ ಕೊರೊನಾ ದೃಢಪಟ್ಟಿದ್ದು, ಇದೇ ಅವಧಿಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ 499 ರೋಗಿಗಳು ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 38,164 ಮಂದಿಗೆ ಹೊಸದಾಗಿ ಸೋಂಕು ತಗುಲಿದ್ದು ಸದ್ಯ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,11,44,229 ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಚಿಕಿತ್ಸೆ ಫಲಕಾರಿಯಾಗದೆ 499 ಮಂದಿ ಸಾವನ್ನಪ್ಪಿದ್ದು, ಈವರೆಗೆ ದೇಶದಲ್ಲಿ ಸೋಂಕಿಗೆ ಮೃತಪಟ್ಟವರ ಸಂಖ್ಯೆ 4,14,108 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 38,660 ಕೊರೊನಾ ಸೋಂಕಿತರು ಚೇತರಿಸಿಕೊಂಡಿದ್ದಾರೆ ಈವರೆಗೆ ದೇಶದಲ್ಲಿ ಚೇತರಿಸಿಕೊಂಡವರ ಸಂಖ್ಯೆ 3,03,08,456 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 4,21,665 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.