ದೇಶದಲ್ಲಿ 39,097 ಹೊಸ ಕೊರೋನ ಪ್ರಕರಣ, 546 ಸಾವು
ನವದೆಹಲಿ, ಜುಲೈ 24 - ದೇಶದಲ್ಲಿ ಕಳದೆ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 39,097 ಮಂದಿಗೆ ಸೋಂಕು ದೃಢಪಟ್ಟಿದ್ದು ಚಿಕಿತ್ಸೆ ಫಲ ಕಾರಿಯಾಗದೆ 546 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 39,097 ಮಂದಿಗೆ ಹೊಸದಾಗಿ ಸೋಂಕು ಖಚಿತವಾಗಿದ್ದು. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,13,32,159 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೋಂಕಿನಿಂದ546 ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 4,20,016 ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 35,087 ಸೋಂಕಿತರು ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.