3ನೇ ಸುತ್ತಿನ ಮಿಷನ್ ಇಂಧ್ರಧನುಷ್ ಲಸಿಕಾಕರಣ ಚಾಲನೆ
ಹೊಸಪೇಟೆ ಅ.9: ಇಂದ್ರಧನುಷ್ 3ನೇ ಸುತ್ತಿನ ಲಸಿಕಾಕರಣ ಕಾರ್ಯಕ್ರಮವನ್ನು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಸೋಮವಾರದಂದು ಹಮ್ಮಿಕೊಳ್ಳಲಾಯಿತು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಂಕರ ನಾಯಕ ಅವರು ಮಕ್ಕಳಿಗೆ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದರು.
ಒಟ್ಟು ಫಲಾನುಭವಿಗಳ ಗುರಿ 3234, ಒಟ್ಟು ಗರ್ಭಿಣಿಯರ ಗುರಿ 560 ಆಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆಸ್ಪತ್ರೆಗಳಲ್ಲಿ ಲಭ್ಯವಿದ್ದು, ವಿವಿಧ ರೋಗಗಳ ತಡೆಗೆ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರು ಲಸಿಕಾ ಸೌಲಭ್ಯ ಪಡೆಯಬಹುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಜಂಬಯ್ಯ ನಾಯಕ, ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.