4,970ಪ್ರಕರಣಗಳು ಇತ್ಯರ್ಥ: 44.45ಕೋಟಿ ರೂ.ಪರಿಹಾರ ವಸೂಲು
ಬಳ್ಳಾರಿ 25: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ಬೃಹತ್ ಮೆಗಾ-ಲೋಕ್ ಅದಾಲತ್’ ಕಾರ್ಯಕ್ರಮ ಶನಿವಾರದಂದು ಬಳ್ಳಾರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆಯಿತು.
ಬೃಹತ್ ಮೆಗಾ-ಲೋಕ್ ಅದಾಲತ್ ದಿನದಂದು ಬಳ್ಳಾರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಒಟ್ಟು 29 ಬೈಠಕ್ಗಳು ನಡೆದವು. ಅದಾಲತ್ನಲ್ಲಿ ಸುಮಾರು ಒಟ್ಟು 10,546 ಪ್ರಕರಣಗಳು ಪರಿಗಣಿಸಲಾಗಿತ್ತು; ಅದರಲ್ಲಿ 4,970 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಮೊತ್ತ ಒಟ್ಟು ರೂ. 44,44,96,317 ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸತೀಶ್ ಜೆ.ಬಾಳಿ ಅವರು ತಿಳಿಸಿದರು. ಈ ಬೃಹತ್ ಮೆಗಾ-ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
ಅದಾಲತ್ನಲ್ಲಿ ಹೆಚ್ಚಾಗಿ ಪಾಲು ವಿಭಾಗ ಪ್ರಕರಣಗಳು ಹಾಗೂ ವೈವಾಹಿಕ/ಕೌಟುಂಬಿಕ ಪ್ರಕರಣಗಳು ಹೆಚ್ಚಾಗಿ ರಾಜಿಯಾಗಿದ್ದು ಕಂಡುಬಂದಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸತೀಶ್ ಜೆ.ಬಾಳಿ ಅವರು ಹೇಳಿದರು.
ಈ ಅದಾಲತ್ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಗಳು/ಪ್ರಕರಣಗಳು ಯಾವುದೇ ನ್ಯಾಯಾಲಯದ ಶುಲ್ಕ ವಿಲ್ಲದೇ ಇತ್ಯರ್ಥಗೊಳಿಸಿಕೊಂಡರು. ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು ಇದ್ದರು.