ಟೆಕ್ಸಾಸ್ ನಲ್ಲಿ ಲಘು ವಿಮಾನ ಅಪಘಾತ: ನಾಲ್ವರ ಸಾವು
ಹೂಸ್ಟನ್, ಸೆಪ್ಟೆಂಬರ್ 21: ಅಮೆರಿಕದ ಟೆಕ್ಸಾಸ್ ನಲ್ಲಿ ಭಾನುವಾರ ಲಘು ವಿಮಾನ ಅಪಘಾತಕ್ಕೀಡಾಗಿ, ಅದರಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.
ಹೂಸ್ಟನ್‌ನ ವಾಯುವ್ಯಕ್ಕೆ 200 ಕಿಲೋಮೀಟರ್ ದೂರದಲ್ಲಿರುವ ಹಿಲ್‌ಟಾಪ್ ಲೇಕ್ಸ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಟೆಕ್ಸಾಸ್ ಸಾರ್ವಜನಿಕ ಸುರಕ್ಷತಾ ಇಲಾಖೆಯ ಅಧಿಕಾರಿಯನ್ನು ಉಲ್ಲೇಖಿಸಿ ವರದಿ ಮಾಡಿವೆ.
ವಿಮಾನದಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.ಪೈಲಟ್ ತುರ್ತು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದೂ ಸ್ಥಳೀಯ ಅಧಿಕಾರಿ ತಿಳಿಸಿದ್ದಾರೆ.