ಕೇಂದ್ರ ಸಂಪುಟದಲ್ಲಿ ಕರ್ನಾಟಕದ ನಾಲ್ವರಿಗೆ ಸ್ಥಾನ: ಸ್ವಾಗತಾರ್ಹ
ಅಥಣಿ 09: ಪ್ರಧಾನಿ ಮೋದಿಯವರ ಕೇಂದ್ರದ ಸಚಿವ ಸಂಪುಟದಲ್ಲಿ ಕರ್ನಾಟಕದ ನಾಲ್ಕು ಸಂಸದರಿಗೆ ಸ್ಥಾನ ದೊರಕಿರುವುದು ಸ್ವಾಗತಾರ್ಹ ಎಂದು ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ,ರಾಜೇಶ ನೇರ್ಲಿ ಹೇಳಿದರು.
ಸಂಸದರಾದ ಶೋಭಾ ಕರಂದ್ಲಾಜೆ, ನಾರಾಯಣ ಸ್ವಾಮಿ, ಭಗವಂತ ಖೂಬಾ ಹಾಗೂ ಕರ್ನಾಟಕದಿಂದ ರಾಜ್ಯ ಸಭೆಗೆ ಆಯ್ಕೆಯಾಗಿರುವ ಉದ್ಯಮಿ ರಾಜೀವ ಚಂದ್ರಶೇಖರ ಇವರನ್ನು ಪ್ರಧಾನಿ ಮೋದಿಯವರು ತಮ್ಮಸಚಿವ ಸಂಪುಟದಲ್ಲಿ ಸೇರೆ್ಡಗೊಳಿಸಿಕೊಂಡಿರುವುದು ಸಂತೋಷದ ಸಂಗತಿಯಾಗಿದೆ ಎಂದ ಅವರು ಮುಂಬರುವ ದಿನಗಳಲ್ಲಿ ಈ ಸಚಿವರ ಮೂಲಕ ಮತ್ತಷ್ಟು ಕೇಂದ್ರದ ಯೋಜನೆಗಳು ನಮ್ಮ ರಾಜ್ಯಕ್ಕೆ ಅನುಷ್ಠಾನಗೊಳ್ಳುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂದು ರಾಜ್ಯ ಸರಕಾರ ಮರು ನಾಮಕರಣ ಮಾಡಿ ಆದೇಶ ಹೊರಡಿಸಿದ್ದು ಸ್ವಾಗತಾರ್ಹ, ಹೈದ್ರಾಬಾದ ಕರ್ನಾಟಕ ಪ್ರದೇಶವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದ ಬಳಿಕ ಇದೀಗ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡಿರುವುದು ಅತ್ಯಂತ ಸೂಕ್ತವಾಗಿದೆ ಈ ಹಿನ್ನೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರ್ಪ ಹಾಗೂ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.