400 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದ ದೃಷ್ಟಿ ಬಾಹುಬಲಿ ಕಾಮಗೌಡ
ರಾಯಬಾಗ 26 : ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡಾಕೂಟದಲ್ಲಿ 400 ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆಯ ಹೊಸ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ದೃಷ್ಟಿ ಬಾಹುಬಲಿ ಕಾಮಗೌಡ ಇವಳನ್ನು ಸಂಸ್ಥೆಯ ಅಧ್ಯಕ್ಷ ಈರಗೌಡ ಪಾಟೀಲ, ಶಾಲೆಯ ಪ್ರಧಾನ ಗುರು ಎಸ್.ಬಿ. ಬೆನಾಡೆ, ದೈಹಿಕ ಶಿಕ್ಷಕ ಎ.ಬಿ. ಜಮಾದಾರ ಹಾಗೂ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.