ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆರಿ್ಡ. ಪಾಟೀಲ ಕಾಲೇಜಿನ 48 ವಿದ್ಯಾರ್ಥಿಗಳು ಆಯ್ಕೆ
ಸಿಂದಗಿ 04: ವಿಜಯಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಹ್ಯಾಂಡ್ಬಾಲ್, ನೆಟ್ಬಾಲ್, ಕುಸ್ತಿ, ಖೋ-ಖೋ ಹಾಗೂ ಟೆನಿಸ್ ವಾಲಿಬಾಲ್ ಸ್ಪರ್ಧೆಗಳಲ್ಲಿ ಸಿಂದಗಿಯ ಆರಿ್ಡ. ಪಾಟೀಲ ಪದವಿ ಪೂರ್ವ ಕಾಲೇಜಿನ ಕ್ರೀಡಾಪಟುಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿವಿಧ ಕ್ರೀಡಾ ವಿಭಾಗಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಗಳಿಸಿದ ಕಾಲೇಜಿನ ಒಟ್ಟು 48 ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ಹ್ಯಾಂಡ್ಬಾಲ್ ಮತ್ತು ನೆಟ್ಬಾಲ್ ತಂಡಗಳು ಪ್ರಥಮ ಸ್ಥಾನ ಪಡೆದರೆ, ಖೋ-ಖೋ ತಂಡ ದ್ವಿತೀಯ ಸ್ಥಾನ ಗಳಿಸಿದೆ. ಬಾಲಕ ಹಾಗೂ ಬಾಲಕಿಯರ ಕುಸ್ತಿ ವಿಭಾಗದಲ್ಲಿ ಪ್ರಥಮ ಸ್ಥಾನ ಲಭಿಸಿದೆ. ಬಾಲಕರ ನೆಟ್ಬಾಲ್, ಖೋ-ಖೋ ಹಾಗೂ ಟೆನಿಸ್ ವಾಲಿಬಾಲ್ ತಂಡಗಳು ದ್ವಿತೀಯ ಸ್ಥಾನ ಪಡೆದಿವೆ. ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಮೇಲುಗೈ ಸಾಧಿಸಿದ ಆರಿ್ಡ. ಪಾಟೀಲ ಪದವಿ ಪೂರ್ವ ಕಾಲೇಜಿಗೆ ‘ಸಮಗ್ರ ವೀರಾಗ್ರಣಿ’ ಪ್ರಶಸ್ತಿ ದೊರೆತಿದೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು, ಉತ್ತರಾಧಿಕಾರಿ ಡಾ. ವಿಶ್ವಪ್ರಭುದೇವ ಶಿವಾಚಾರ್ಯರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಪ್ರಾಚಾರ್ಯ ಬಿ.ಎಂ. ಸಿಂಗನಳ್ಳಿ, ದೈಹಿಕ ಶಿಕ್ಷಣ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ ಸೇರಿದಂತೆ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕ್ರೀಡಾಪಟುಗಳನ್ನು ಅಭಿನಂದಿಸಿ, ರಾಜ್ಯಮಟ್ಟದಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.