ಪತ್ರಕರ್ತರಿಗೆ ಶೇ.5ರಷ್ಟು ನಿವೇಶನ ಕಾಯ್ದಿರಿಸುವಿಕೆ: ಸಚಿವ ಭೈರತಿ'
ಬಳ್ಳಾರಿ,ಜೂ.29: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ಧಿಪಡಿಸುತ್ತಿರುವ ವಸತಿ ನಿವೇಶನಗಳಲ್ಲಿ ಪತ್ರಕರ್ತರಿಗೆ ಶೇ.5 ರಷ್ಟು ನಿವೇಶನಗಳನ್ನು ಕಾಯ್ದಿರಿಸಲಾಗಿದೆ. ರಾಜ್ಯದೆಲ್ಲೆಡೆ ಇದನ್ನೇ ಜಾರಿಗೆ ತರಲು ನಿರ್ಧರಿಸಲಾಗಿದ್ದು, ಸಕರ್ಾರದಿಂದ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದರು.
ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಪತ್ರಿಕಾಭವನದಲ್ಲಿ ಬಳ್ಳಾರಿ ಪತ್ರಕರ್ತರಿಂದ ಸನ್ಮಾನ ಸ್ವೀಕರಿಸಿ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.
ಮಾಧ್ಯಮದವರಿಗೆ ನಿವೇಶನಗಳನ್ನು ರಿಯಾಯ್ತಿ ದರದಲ್ಲಿ ಒದಗಿಸುವುದಕ್ಕೆ ಸಂಬಂಧಿಸಿದಂತೆ ಇಲಾಖೆಯ ಪ್ರಧಾನ ಕಾರ್ಯದಶರ್ಿಗಳು ಹಾಗೂ ಇತರೇ ಅಧಿಕಾರಿಗಳೊಂದಿಗೆ ಚಚರ್ಿಸಿ ನಿರ್ಧರಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಹಳ ವರ್ಷಗಳ ಹಿಂದೆ ನಗರದಲ್ಲಿ ಮಾಡಿರುವ ಒಳಚರಂಡಿ ವ್ಯವಸ್ಥೆ ಹದಗೆಟ್ಟಿದೆ.ರೂ.221 ಕೋಟಿ ವೆಚ್ಚದಲ್ಲಿ ಒಳಚರಂಡಿ ಯೋಜನೆ ರೂಪಿಸಲು ನಿರ್ಧರಿಸಲಾಗಿದೆ. ತುಂಗಭದ್ರ ಜಲಾಶಯದಿಂದ ನೇರವಾಗಿ ಬಳ್ಳಾರಿ ನಗರಕ್ಕೆ ನೀರು ಸರಬರಾಜು ಮಾಡುವುದಕ್ಕೆ ಸಂಬಂಧಿಸಿದಂತೆ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಡಿಪಿಎಆರ್ ತಯಾರಿಸಲು ಸೂಚಿಸಲಾಗಿದೆ.
ಬಳ್ಳಾರಿ ಅಭಿವೃದ್ಧಿ ಚಟುವಟಿಕೆಗಳಿಗೆ ಡಿಎಂಎಫ್ ಅನುದಾನ ಬಳಕೆಗೆ ಚಿಂತನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ತಿಳಿಸಲಾಗಿದೆ ಎಂದರು.
ಬಳ್ಳಾರಿ ಸೇರಿದಂತೆ 5 ನಗರಗಳನ್ನು ಸ್ಮಾಟರ್್ ಸಿಟಿಗೆ ಪರಿಗಣಿಸುವಂತೆ ಕೋರಿ ಕೇಂದ್ರ ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ಸಿಂಗ್, ಶಾಸಕ ಜಿ.ಸೋಮಶೇಖರರೆಡ್ಡಿ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಮತ್ತಿತರರು ಇದ್ದರು.