ಕೃ.ವಿ.ವಿ. ಧಾರವಾಡದಲ್ಲಿ ಡಿಜಿಟಲ್ ಕೃಷಿ ಕುರಿತು 5 ದಿನಗಳ ತರಬೇತಿ ಕಾರ್ಯಕ್ರಮ
5-day training program on digital agriculture at UAS, Dharwad
ಲೋಕದರ್ಶನ ವರದಿ
ಧಾರವಾಡ 22 : ಕೃಷಿ ವಿಶ್ವವಿದ್ಯಾಲಯ ಧಾರವಾಡದ ಸಮೇತಿ (ಉತ್ತರ), ವಿಸ್ತರಣಾ ನಿರ್ದೇಶನಾಲಯ, ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ (ಆತ್ಮ) ಯೋಜನೆಯಡಿ ಡಿಜಿಟಲ್ ಕೃಷಿ ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ದಿನಾಂಕ 21-23 ಜುಲೈ, 2026ರ ವರೆಗೆ ಸಿಬ್ಬಂದಿ ತರಬೇತಿ ಘಟಕದಲ್ಲಿ ಹಮ್ಮಿಕೊಂಡಿದ್ದು ಡಾ. ಮಂಜುಳಾ ಎನ್., ಮಾನ್ಯ ವಿಸ್ತರಣಾ ನಿರ್ದೇಶಕರು ಹಾಗೂ ನಿರ್ದೇಶಕರು ಸಮೇತಿ (ಉತ್ತರ), ಕೃ.ವಿ.ವಿ., ಧಾರವಾಡ ಇವರು ಉದ್ಘಾಟಿಸಿದರು.
ಉತ್ತರ ಕರ್ನಾಟಕದ 14 ಜಿಲ್ಲೆಗಳ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಆತ್ಮ ಸಿಬ್ಬಂದಿಗಳಿಗೆ ತರಬೇತಿ ಹಮ್ಮಿಕೊಳ್ಳಲಾಗಿತ್ತು. ವಿಸ್ತರಣಾ ನಿರ್ದೇಶಕರು ತಮ್ಮ ಉದ್ಘಾಟನಾ ಭಾಷಣದಲ್ಲಿ ಈಗ ಡಿಜಿಟಲ್ ಯುಗ ಆರಂಭವಾಗಿದೆ. ಇತ್ತೀಚಿನ ದಿನಗಳಲ್ಲಿ ಡಿಜಿಟಲೈಜೇಷನ್ ಬಗ್ಗೆ ತಿಳಿದುಕೊಳ್ಳುವುದು ಅತಿ ಅವಶ್ಯಕವಾಗಿದೆ. ಕೃಷಿಯಲ್ಲಿ ಡಿಜಿಟಲ್ ತಂತ್ರಜ್ಞಾನಗಳ ಅಳವಡಿಕೆಯಿಂದ ಉತ್ಪಾದಕತೆ ಹೆಚ್ಚಿಸುವುದು ಹಾಗೂ ರೈತರಿಗೆ ತ್ವರಿತ ಮಾಹಿತಿ ಮತ್ತು ಸೇವೆಗಳನ್ನು ತಲುಪಿಸುವುದು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ರೈತರು ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯನ್ನು ಲಾಭದಾಯಕವಾಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಕೃಷಿ ಮಹಾವಿದ್ಯಾಲಯ, ಧಾರವಾಡದ ಹವಾಮಾನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಎಂ.ಪಿ.ಪೋತದಾರ್ ರವರು ಮಾತನಾಡಿ ಕೃಷಿ ಕ್ಷೇತ್ರದಲ್ಲಿ ಡಿಜಿಟಲ್ ತಂತ್ರಜ್ಞಾನಗಳ ಮಹತ್ವವನ್ನು ವಿವರಿಸಿ, ಮುಖ್ಯವಾಗಿ ಕೀಟ ಮತ್ತು ರೋಗಗಳ ನಿರ್ವಹಣೆಯಲ್ಲಿ ಡಿಜಿಟಲೈಜೇಷನ್ ತುಂಬಾ ಉಪಯುಕ್ತವಾಗಿದೆ ಎಂದು ಅಭಿಪ್ರಾಯಪಟ್ಟರು. ಡಾ.ಎಸ್. ಎನ್. ಜಾಧವ, ಪ್ರಾಧ್ಯಾಪಕರು ಹಾಗೂ ಸಂಯೋಜಕರು ಸಮೇತಿ (ಉತ್ತರ) ಡಾ.ಪಿ. ನಾಗರಾಜು,
ಪ್ರಾಧ್ಯಾಪಕರು ಮತ್ತು ನೋಡಲ್ ಅಧಿಕಾರಿ (ಕೆವಿಕೆ) ಮತ್ತು ಗೀತಾ ಲೋಳಸೂರಮಠ, ಉಪ ನಿರ್ದೇಶಕರು, ಸಮೇತಿ (ಉತ್ತರ), ಕೃ.ವಿ.ವಿ., ಧಾರವಾಡ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಮೇತಿ (ಉತ್ತರ), ವಿಸ್ತರಣಾ ನಿರ್ದೇಶನಾಲಯ, ಕೃಷೋನ್ನತಿ-ಕೃಷಿ ವಿಸ್ತರಣೆ ಉಪ ಅಭಿಯಾನ (ಆತ್ಮ) ಯೋಜನೆಯಡಿ ಆಯೋಜಿಸಲಾದ ಡಿಜಿಟಲ್ ಕೃಷಿ ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ಡಾ. ಮಂಜುಳಾ ಎನ್., ಮಾನ್ಯ ವಿಸ್ತರಣಾ ನಿರ್ದೇಶಕರು ಹಾಗೂ ನಿರ್ದೇಶಕರು ಸಮೇತಿ(ಉತ್ತರ), ಕೃ.ವಿ.ವಿ., ಧಾರವಾಡ ಇವರು ಉದ್ಘಾಟಿಸಿದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 