500 ಮೂಟೆ ಅಕ್ರಮ ಪಡಿತರ ವಶ: ಚಾಲಕನ ಬಂಧನ
ಮೈಸೂರು, ಮೇ 13, ಲಾಕ್ ಡೌನ್ ನಡುವೆಯೂ ಅಕ್ರಮವಾಗಿ ಕೇರಳಕ್ಕೆ ಸಾಗಾಟ ಮಾಡುತಿದ್ದ 500 ಮೂಟೆ ಪಡಿತರ ಅಕ್ಕಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಲಾರಿಯಲ್ಲಿ 500 ಅಕ್ಕಿ ಮೂಟೆಗಳನ್ನು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ರೈಸ್ ಮಿಲ್ನಿಂದ ನಂಜನಗೂಡು ಮಾರ್ಗವಾಗಿ ಕೇರಳಕ್ಕೆ ಅಕ್ರಮವಾಗಿ ಅಕ್ಕಿ ಸಾಗಿಸಲಾಗುತ್ತಿತ್ತು.ನಂಜನಗೂಡು ಆಹಾರ ಇಲಾಖೆ ಹಾಗೂ ಪೊಲೀಸರು ನಂಜನಗೂಡು ಪಟ್ಟಣದ ಹೆಜ್ಜಿಗೆ ಸೇತುವೆ ಬಳಿ ಕಾರ್ಯಾಚರಣೆ ನಡೆಸಿ 500 ಅಕ್ಕಿ ಮೂಟೆ, ಲಾರಿ ಹಾಗೂ ಕೇರಳ ಮೂಲದ ಚಾಲಕ ನಿಜಾಮುದ್ದಿನ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನನ್ನು ವಿಚಾರಣೆ ನಡೆಸಲಾಗುತ್ತಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 