ವಲಸೆ ಕಾರ್ಮಿಕರಿಗೆ ತಲಾ 5 ಕೆಜಿ ಅಕ್ಕಿ, 2 ಕೆ.ಜಿ.ಕಡಲೆಕಾಯಿ: ಸಚಿವ ಗೋಪಾಲಯ್ಯ
ಬೆಂಗಳೂರು, ಮೇ 18, ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಪ್ಯಾಕೇಜ್ -2 ಬಿಡುಗಡೆ ಮಾಡಿದ್ದು ವಲಸೆ ಕಾರ್ಮಿಕರಿಗೆ ಮೇ ಮತ್ತು ಜೂನ್ ನಲ್ಲಿ ಆಹಾರ ಧಾನ್ಯಗಳನ್ನು ವಿತರಿಸಲು ನಿರ್ಧಾರ ಕೈಗೊಂಡಿದೆ.ವಲಸೆ ಕಾರ್ಮಿಕರಿಗೆ ಇದೇ ತಿಂಗಳ 26 ರಿಂದ 31ರವರೆಗೆ ಪ್ರತಿ ವ್ಯಕ್ತಿಗೆ 5ಕೆ.ಜಿ ಅಕ್ಕಿ ಉಚಿತವಾಗಿ ನೀಡಲು ನಿರ್ಧರಿಸಿದ್ದು ಮುಂದಿನ ತಿಂಗಳು ಜೂನ್ 1 ರಿಂದ ದಿನಾಂಕ 10 ರವರೆಗೆ ಪ್ರತಿ ವ್ಯಕ್ತಿಗೆ 5ಕೆಜಿ ಅಕ್ಕಿ ಮತ್ತು ಪ್ರತಿ ಕುಟುಂಬಕ್ಕೆ 2 ಕೆಜಿ ಕಡಲೆಕಾಳು ಉಚಿತವಾಗಿ ನೀಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕರ ಸರಬರಾಜು ಸಚಿವ ಕೆ. ಗೋಪಾಲಯ್ಯ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಇನ್ನು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಪ್ಯಾಕೇಜ್ 2ರ ಸಂಪೂರ್ಣ ವೆಚ್ಚ ಕೇಂದ್ರ ಸರ್ಕಾರ ವಹಿಸಿಕೊಂಡಿದೆ. ಇದಕ್ಕೆ 40.193 ಮೆಟ್ರಿಕ್ ಟನ್. ಅಕ್ಕಿ ಹಾಗೂ 2,544 ಟನ್ ಕಡಲೆಕಾಳು ಅವಶ್ಯಕತೆಯಿದ್ದು, ಇದರಲ್ಲಿ ಏನಾದರೂ ಕಡಿಮೆಯಾದರೆ ಕೇಂದ್ರದಿಂದ ಕಳಿಸಿಕೊಡಲಾಗುತ್ತದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ ಎಂದು ಸಚಿವ ಗೋಪಾಲಯ್ಯ ಅವರು ಹೇಳಿದರು. ದೂರವಾಣಿ ಮೂಲಕ ಕೇಂದ್ರ ಆಹಾರ ಸಚಿವರ ಬಳಿ ಈ ಕುರಿತು ಈಗಾಗಲೇ ಮಾತನಾಡಿದ್ದೇನೆ. ಕೊರೋನ ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ಕಷ್ಟಕ್ಕೆ ಸ್ಪಂದಿಸುತ್ತಿರುವ ಅವರಿಗೆ ನಾನು ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದರು.ವಲಸೆ ಕಾರ್ಮಿಕರನ್ನು ಗುರುತಿಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿದ್ದು ನಮ್ಮ ರಾಜ್ಯದಲ್ಲಿ 40.19ಲಕ್ಷ ವಲಸೆ ಕಾರ್ಮಿಕರಿದ್ದಾರೆ. ಅವರೆಲ್ಲರು ಈ ಪ್ಯಾಕೇಜ್ 2ರ ಪ್ರಯೋಜನ ಪಡೆದುಕೊಳ್ಳಲಿದ್ದಾರೆ ಎಂದರು.ಪ್ರಧಾನ ಮಂತ್ರಿ ಗರೀಬ್ ಅನ್ನಯೋಜನೆಯ ಪ್ರಕೇಜ್ -2 ರ ಪ್ರಯೋಜನವನ್ನು ಪಡೆದುಕೊಳ್ಳಲು ವಲಸೆ ಕಾರ್ಮಿಕರಲ್ಲಿ ಈ ಮಾನದಂಡಗಳನ್ನು ಕಡ್ಡಾಯ ಮಾಡಲಾಗಿದೆ. ವಲಸೆ ಕಾರ್ಮಿಕರು ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬಂದವರಾಗಿರಬೇಕು. ಇವರು ಯಾವುದೇ ಅಂತ್ಯೋದಯ / ಬಿಪಿಎಲ್/ ಎಪಿಎಲ್/ ಕಾರ್ಡ್ ಹೊಂದಿರಬಾರದು. ಇವರು ಸ್ವಂತ ಮನೆ ಹೊಂದಿರಬಾರದು ಹಾಗೂ ಆದಾಯ ತೆರಿಗೆ ಪಾವತಿದಾರರಾಗಿರಬಾರದು ಎಂದು ಸಚಿವರು ತಿಳಿಸಿದರು.ಇನ್ನು ಪಡಿತರವನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸಲಾಗುವುದು. ಬೆಂಗಳೂರಿನಲ್ಲಿ ಬಿ.ಬಿ.ಎಂ.ಪಿ / ಕಾರ್ಮಿಕ ಇಲಾಖೆಯ ಅಧಿಕಾರಿಗಳ ಸಹಯೋಗದೊಂದಿಗೆ ಪಡಿತರ ವಿತರಿಸಲಾಗುವುದು ಎಂದು ಆಹಾರ ಸಚಿವ ಗೋಪಾಲಯ್ಯ ಹೇಳಿದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 