ಜಪಾನ್ನಲ್ಲಿ 6.3 ತೀವ್ರತೆಯ ಭೂಕಂಪನ
ಟೋಕಿಯೊ, ಜೂನ್ 14, ಜಪಾನ್ನ ಕಾಗೋಶಿಮಾ ಪ್ರಾಂತ್ಯದ ಅಮಾಮಿಯೋಶಿಮಾ ದ್ವೀಪದ ಕರಾವಳಿಯಲ್ಲಿ ರಿಕ್ಟರ್ ಮಾಪಕದಲ್ಲಿ 6.3 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ.ಸ್ಥಳೀಯ ಕಾಲಮಾನ ಬೆಳಿಗ್ಗೆ 12.51 ಕ್ಕೆ ಭೂಕಂಪನ ಸಂಭವಿಸಿದ್ದು, ಅದರ ಕೇಂದ್ರಬಿಂದು ಉತ್ತರಕ್ಕೆ 28.8 ಡಿಗ್ರಿ ಅಕ್ಷಾಂಶದಲ್ಲಿ ಮತ್ತು ಪೂರ್ವಕ್ಕೆ 128.3 ಡಿಗ್ರಿ ರೇಖಾಂಶದಲ್ಲಿ ಮತ್ತು 160 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಜಪಾನ್ ಭೂಕಂಪನ ತೀವ್ರತೆ ಮಾಪಕದಲ್ಲಿ ದಾಖಲಾಗಿರುವಂತೆ, ಕಾಗೋಶಿಮಾದ ಕೆಲವು ಭಾಗಗಳಲ್ಲಿ ಭೂಕಂಪನ 4 ಬಾರಿ ಸಂಭವಿಸಿದ್ದು, ಕೆಲ ಕಡೆ ತೀವ್ರತೆ 7ರವರೆಗೆ ಏರಿದೆ ಎಂದು ಸಂಸ್ಥೆ ತಿಳಿಸಿದೆ.ಭೂಕಂಪನದಿಂದ ಯಾವುದೇ ಸಾವು-ನೋವು ಇಲ್ಲವೇ ಆಸ್ತಿ-ಪಾಸ್ತಿ ನಷ್ಟದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ. ಭೂಕಂಪನದ ಹಿನ್ನೆಲೆಯಲ್ಲಿ ಸುನಾಮಿ ಅಪಾಯ ಇಲ್ಲವೇ ಮುನ್ನೆಚ್ಚರಿಕೆಯ ಬಗ್ಗೆ ಯಾವುದೇ ಪ್ರಕಟಣೆ ಹೊರಡಿಸಿಲ್ಲ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 