ಕಲಬುರಗಿಯಲ್ಲಿ ಮತ್ತೆ 6 ಕೊರೋನಾ ಪ್ರಕರಣ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 520ಕ್ಕೇರಿಕೆ
ಬೆಂಗಳೂರು, ಏ 28, ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಆರು ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. 425ನೇ ರೋಗಿಯ ಸಂಪರ್ಕದಲ್ಲಿದ್ದ 55 ವರ್ಷದ ವೃದ್ಧ, 40 ವರ್ಷದ ಮಹಿಳೆ, 43 ವರ್ಷದ ವ್ಯಕ್ತಿ, 28 ವರ್ಷದ ಯುವತಿ, 45 ವರ್ಷದ ಮಹಿಳೆ ಮತ್ತು 22 ವರ್ಷದ ಯುವತಿಯಲ್ಲಿ ಸೋಂಕು ದೃಢಪಟ್ಟಿದೆ. ಇದರ ಜೊತೆಗೆ, ಗದಗದ 75 ವರ್ಷದ ವೃದ್ಧರಲ್ಲಿ ಕೂಡ ಸೋಂಕು ಪತ್ತೆಯಾಗಿದೆ. ಇವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜೊತೆಗೆ ಬಿಬಿಎಂಪಿಯ 135ನೇ ಕಂಟೈನ್ ಮೆಂಟ್ ವಲಯಕ್ಕೆ ಭೇಟಿನೀಡಿದ 48 ವರ್ಷದ ವ್ಯಕ್ತಿಯಲ್ಲಿ ಕೂಡ ಸೋಂಕು ದೃಢಪಟ್ಟಿದೆ.ಸೋಮವಾರ ರಾತ್ರಿ ಕಲಬುರಗಿ ಜಿಲ್ಲೆಯ 57 ವರ್ಷದ ವ್ಯಕ್ತಿಯೊಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 520ಕ್ಕೇರಿಕೆಯಾಗಿದೆ. ಒಟ್ಟು 21 ಜನರು ಮೃತಪಟ್ಟಿದ್ದಾರೆ ಮತ್ತು 198 ಜನರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 