ಮಧ್ಯಪ್ರದೇಶದಲ್ಲಿ ನದಿಗೆ ಉರುಳಿದ ಬಸ್: 6 ಸಾವು, 18 ಮಂದಿಗೆ ಗಾಯ
ರಾಯಿಸೆನ್, ಮಧ್ಯಪ್ರದೇಶ, ಅ 3: ಬಸ್ಸೊಂದು ರೀಚ್ಹಾನ್ ನದಿಗೆ ಉರುಳಿದ ಪರಿಣಾಮ ಇಬ್ಬರು ಮಹಿಳೆಯರು, ಒಂದು ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿ, 18ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರಾಯಿಸೆನ್ ದರ್ಗಾ ಸಮೀಪ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನಲ್ಲಿ ಒಟ್ಟು 45 ಮಂದಿ ಪ್ರಯಾಣಿಕರಿದ್ದರು. ಇಂದೋರ್ನಿಂದ ಚಾತರ್ಪುರಕ್ಕೆ ಹೋಗುವ ಮಾರ್ಗ ಮಧ್ಯೆ ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಸ್ಥಳೀಯರು ಮತ್ತು ಪೊಲೀಸರು ವಾಹನದಿಂದ ಹೊರಗೆ ತಂದು ನಂತರ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು. ಹನ್ನೊಂದು ಮಂದಿಯನ್ನು ಭೋಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರಕ್ಷಣಾ ಕಾರ್ಯಾಚರಣೆಯ ವೇಳೆ ಜಿಲ್ಲಾಧಿಕಾರಿ ಉಮಾಶಂಕರ್ ಭಾರ್ಗವ್ ಕೂಡ ಗಾಯಗೊಂಡಿದ್ದಾರೆ.ಅಪಘಾತದಲ್ಲಿ ಗಂಭೀರ ಗಾಯಗೊಂಡವರಿಗೆ 50 ಸಾವಿರ ರೂ ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ ತಲಾ 10 ಸಾವಿರ ರೂ.ಪರಿಹಾರವನ್ನು ಜಿಲ್ಲಾಧಿಕಾರಿ ಘೋಷಿಸಿದ್ದಾರೆ. ಮಂಡೀಪುರದಿಂದ ಕ್ರೇನ್ ತಂದು ಬಸ್ಸನ್ನು ಹೊರತೆಗೆಯಲಾಗಿದೆ ಎಂದು ಇನ್ಸ್ಪೆಕ್ಟರ್ ಜನರಲ್ ಆಶುತೋಷ್ ರಾಯ್ ತಿಳಿಸಿದ್ದಾರೆ. ಮೃತಪಟ್ಟವರನ್ನು ರವಿ ಬನ್ಸಾಲ್ (ಛಾತರ್ಪುರ), ಸಾಗರ್ಬಾಯಿ (ರಾಯಿಸನ್), ಅನ್ವರ್ ಖಾನ್ (ಸಾಗರ್), ಉಜೆಫಾ ಖಾನ್ (ಬೇಗಮ್ಗಂಜ್) ಮತ್ತು ಎರಡು ವರ್ಷದ ದೀಪಕ್ ಬನ್ಸಾಲ್ ಎಂದು ಗುರುತಿಸಲಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 