ಹೊಸೂರು ಗ್ರಾಮದಲ್ಲಿ 60 ದಿನಗಳ ಕಾನೂನು ಅರಿವು ಅಭಿಯಾನ ಆರಂಭ

ಹೊಸೂರು ಗ್ರಾಮದಲ್ಲಿ 60 ದಿನಗಳ ಕಾನೂನು ಅರಿವು ಅಭಿಯಾನ ಆರಂಭ  60-day legal awareness campaign launched in Hosur village

ಲೋಕದರ್ಶನ ವರದಿ  

ಹಾವೇರಿ, ಸೆ. 07: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲೆಯ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಟಾಳ ಗ್ರಾಮವನ್ನು 60 ದಿನಗಳ ಕಾನೂನು ಅರಿವು ಅಭಿಯಾನಕ್ಕಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಬಿರಾದಾರ ದೇವೇಂದ್ರ​‍್ಪ ಎನ್‌. ತಿಳಿಸಿದರು.  ಅರಟಾಳ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಸಭಾಭವನದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿಗ್ಗಾಂವ ತಾಲೂಕು ಕಾನೂನು ಸೇವೆಗಳ ಸಮಿತಿ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಹೊಸೂರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ 60 ದಿನಗಳ ಮೆಗಾ ಡ್ರೈವ್ ಕಾರ್ಯಕ್ರಮದ ಅಂಗವಾಗಿ ಕಾನೂನು ಸಲಹಾ ಕೇಂದ್ರ ಉದ್ಘಾಟನೆ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.