ಬೆಳಗಾವಿ ಸರ್ಕಾರಿ ಮಹಿಳಾ ಕಾಲೇಜಿನ 61 ವಿದ್ಯಾರ್ಥಿನಿಯರು ಟಾಟಾ ಕಂಪನಿಗೆ ಆಯ್ಕೆ: ಸಾಧಕರಿಗೆ ಬೀಳ್ಕೊಡುಗೆ
61 students of Belgaum Government Women's College selected for Tata Company: Farewell to achievers
ಬೆಳಗಾವಿ 16 : ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ವಿದ್ಯಾಲಯದಲ್ಲಿ ಬಹುತೇಕ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿದ್ದು, ಇಲ್ಲಿನ ಶಿಕ್ಷಕರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿ ನಿಂತಿದ್ದಾರೆ" ಎಂದು ಹುಕ್ಕೇರಿಯ ನಿವೃತ್ತ ಪ್ರಾಂಶುಪಾಲರಾದ ಸತೀಶ ಕುಮಾರ ಗವತಿ ಅವರು ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಕೋಶದ ವತಿಯಿಂದ, ಟಾಟಾ ಕಂಪನಿಗೆ ಆಯ್ಕೆಯಾಗಿರುವ ವಿದ್ಯಾರ್ಥಿನಿಯರಿಗಾಗಿ ಜೂನ್ 16 ರಂದು ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.ಕಳೆದ ಮೇ 14 ರಂದು ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳದಲ್ಲಿ ಒಟ್ಟು 397 ವಿದ್ಯಾರ್ಥಿನಿಯರು ವಿವಿಧ ಕಂಪನಿಗಳಿಗೆ ಆಯ್ಕೆಯಾಗಿದ್ದರು. ಪ್ರಸ್ತುತ ಜಿಲ್ಲೆಯಲ್ಲಿ 61 ವಿದ್ಯಾರ್ಥಿನಿಯರು ಪ್ರತಿಷ್ಠಿತ ಟಾಟಾ ಕಂಪನಿಗೆ ಆಯ್ಕೆಯಾಗಿರುವುದು ಅತ್ಯಂತ ಸಂತಸದ ವಿಷಯವಾಗಿದೆ.
ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿನಿಯರು ಉದ್ಯೋಗಕ್ಕೆ ಆಯ್ಕೆಯಾಗುವ ಮೂಲಕ ನಮ್ಮ ವಿದ್ಯಾಲಯವು ಇತರರಿಗೆ ಮಾದರಿಯಾಗಬೇಕು. ಈ ಕಂಪನಿಗಳಿಗೆ ಆಯ್ಕೆಯಾಗಿರುವ ವಿದ್ಯಾರ್ಥಿನಿಯರ ಪರಿಶ್ರಮ ಶ್ಲಾಘನೀಯವಾಗಿದ್ದು, ಇದು ಹೆಮ್ಮೆ ಪಡುವಂತಹ ಕಾರ್ಯವಾಗಿದೆ" ಎಂದು ಅವರು ಹೇಳಿದರು."ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳನ್ನು ಸ್ವಾವಲಂಬಿಗಳನ್ನಾಗಿ ಹಾಗೂ ಉದ್ಯೋಗಸ್ಥರನ್ನಾಗಿ ಮಾಡಲು ಕಾಲೇಜು ಅನೇಕ ರೀತಿಯ ಪರಿಶ್ರಮ ಪಡುತ್ತಿದೆ. ಸಾಮಾನ್ಯವಾಗಿ ಕಂಪನಿಗಳು ಯಾವುದೋ ಒಂದೇ ಕ್ಷೇತ್ರಕ್ಕೆ ಸೀಮಿತವಾಗಿರುತ್ತವೆ. ಆದರೆ ಟಾಟಾ ಕಂಪನಿಯು ಒಂದೇ ಕ್ಷೇತ್ರಕ್ಕೆ ಸೀಮಿತವಾಗಿರದೆ ವೈವಿಧ್ಯಮಯ ಅವಕಾಶಗಳನ್ನು ನೀಡುತ್ತಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ.
ದೇಶವನ್ನು ಕಟ್ಟುವ ಕಾಯಕದಲ್ಲಿ ವಿದ್ಯಾರ್ಥಿನಿಯರೆಲ್ಲರೂ ಭಾಗಿಯಾಗಬೇಕು" ಎಂದು ಅವರು ಕರೆ ನೀಡಿದರು.ಇದೇ ವೇಳೆ ಹಿರಿಯ ಪ್ರೊಫೆಸರ್ ರಮೇಶ್ ಮಾಂಗಳೆಕರ್ ಮಾತನಾಡಿ, "ಇಲ್ಲಿಯವರೆಗೆ ನಮ್ಮ ಕಾಲೇಜಿನಿಂದ ಸುಮಾರು 2,000 ವಿದ್ಯಾರ್ಥಿನಿಯರನ್ನು ವಿವಿಧ ಉದ್ಯೋಗಗಳಿಗೆ ಆಯ್ಕೆ ಮಾಡಿ ಕಳುಹಿಸಲಾಗಿದೆ. ನಮ್ಮ ವಿದ್ಯಾಲಯವು ಕಳೆದ ಕೆಲವು ವರ್ಷಗಳಿಂದ ಗ್ರಾಮೀಣ ಭಾಗದ ಬಡ ಕುಟುಂಬದ ಮಕ್ಕಳಿಗೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ನಿರಂತರವಾಗಿ ಶ್ರಮಿಸುತ್ತಿದೆ" ಎಂದರು.ಕಾರ್ಯಕ್ರಮದಲ್ಲಿ ಉದ್ಯೋಗ ಸಂಯೋಜಕರಾದ ಶಮಶುದ್ಧೀನ್ ನದಾಫ್, ಪ್ರವೀಣ್ ಕೋರ್ಬೋ, ಬಸಮ್ಮ, ಬಿ. ಎಸ್.ಗಂಗನಳಿ, ಗ್ರಂಥಪಾಲಕರಾದ ಸಿದ್ಧೇಶ್ವರ ಕಣಬರ್ಗಿ ಸೇರಿದಂತೆ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 