ಬೆಳಗಾವಿ

65 ಲಕ್ಷ ವೆಚ್ಚದಲ್ಲಿ ವಿಠ್ಠಲ ರುಕ್ಮಾಯಿ ಮಂದಿರ ನಿರ್ಮಾಣ

65 ಲಕ್ಷ ವೆಚ್ಚದಲ್ಲಿ ವಿಠ್ಠಲ ರುಕ್ಮಾಯಿ ಮಂದಿರ ನಿರ್ಮಾಣ
65 Lakṣa veccadalli viṭhṭhala rukmāyi mandira nirmāṇa

65 ಲಕ್ಷ ವೆಚ್ಚದಲ್ಲಿ ವಿಠ್ಠಲ ರುಕ್ಮಾಯಿ ಮಂದಿರ ನಿರ್ಮಾಣ  

ಬೆಳಗಾವಿ 12 : ಕೀಣೆ ಗ್ರಾಮದಲ್ಲಿ ಭಕ್ತರ ಬಹುದಿನಗಳ ಆಶಯವಾಗಿರುವ ಶ್ರೀ ವಿಠ್ಠಲ ರುಕ್ಮಾಯಿ ಮಂದಿರದ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದ್ದು, 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದ ಕಟ್ಟಡದ ಮೇಲ್ಚಾವಣಿ  ಕಾಮಗಾರಿಗೆ ಶನಿವಾರ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮದ ಹಿರಿಯರು, ಮುಖಂಡರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಸ್ಲ್ಯಾಬ್ ಕಾಮಗಾರಿಗೆ ಚಾಲನೆ ನೀಡುವ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.  

ಗ್ರಾಮದ ಆರಾಧ್ಯ ದೈವವಾಗಿರುವ ಶ್ರೀ ವಿಠ್ಠಲ ರುಕ್ಮಾಯಿ ಮಂದಿರವು ಗ್ರಾಮಸ್ಥರ ಭಕ್ತಿ, ಶ್ರದ್ಧೆ ಹಾಗೂ ಧಾರ್ಮಿಕ ನಂಬಿಕೆಯ ಪ್ರತೀಕವಾಗಿದೆ. ನೂತನ ಮಂದಿರ ನಿರ್ಮಾಣದಿಂದ ಗ್ರಾಮದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.  

ಮಂದಿರ ನಿರ್ಮಾಣ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಕಾಮಗಾರಿ ಪೂರ್ಣಗೊಂಡ ಬಳಿಕ ಶೀಘ್ರದಲ್ಲೇ ಮಂದಿರವನ್ನು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಲಾಯಿತು.  

ಮಂದಿರವು ಗ್ರಾಮದ ಜನರ ಧಾರ್ಮಿಕ ಭಾವನೆ, ಒಗ್ಗಟ್ಟು ಹಾಗೂ ಭಕ್ತಿಯ ಕೇಂದ್ರವಾಗಿ ರೂಪುಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪೂಜೆ-ಪುನಸ್ಕಾರಗಳು ಹಾಗೂ ಉತ್ಸವಗಳನ್ನು ಆಯೋಜಿಸಲು ಅನುಕೂಲವಾಗಲಿದೆ ಎಂದು ಗ್ರಾಮಸ್ಥರು ಆಶಯ ವ್ಯಕ್ತಪಡಿಸಿದರು. ಸ್ಲ್ಯಾಬ್ ಕಾಮಗಾರಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. 


ಸುದ್ದಿ ಓದಿ