ಕಲಬುರಗಿ ಜಿಲ್ಲಾ ಕಾಂಗ್ರೆಸ್ ನಿಂದ 7ಲಕ್ಷ ರೂ ದೇಣಿಗೆ
ಕಲಬುರ್ಗಿ, ಜ 31, 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಲಬುರಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ 7 ಲಕ್ಷ ರೂಪಾಯಿ ದೇಣಿಗೆ ನೀಡಲಾಗಿದೆ.ಇದೇ ಫ್ರೆಬ್ರುವರಿ 5, 6 ಮತ್ತು 7ರಂದು ಮೂರು ದಿನಗಳ ಕಾಲ ನಗರದ ಗುಲ್ಬರ್ಗ ವಿವಿ ಆವರಣದಲ್ಲಿ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ. ಈಗಾಗಲೇ ವಿವಿಧ ಸಂಘ-ಸಂಸ್ಥೆಗಳು ದೇಣಿಗೆ ನೀಡಿವೆ. ಇಂದು ಶಾಸಕ ಪ್ರಿಯಾಂಕ ಖರ್ಗೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ್ ಅವರು ಕಲಬುರ್ಗಿ ಜಿಲ್ಲಾ ಸಿಇಓ ರಾಜಾ ಅವರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ 7 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು.ಇತ್ತೀಚೆಗೆ ಜಿಲ್ಲಾಧಿಕಾರಿ ಬಿ.ಶರತ್ ತಮ್ಮ ಒಂದು ತಿಂಗಳ ವೇತನವನ್ನು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೇಣಿಗೆಯಾಗಿ ನೀಡಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 