75ನೇ ಗಣರಾಜ್ಯೋತ್ಸವ ಕಾರ್ಯಕ್ರಮ
ರಾಣಿಬೆನ್ನೂರ 30: ಭಾರತೀಯರನ್ನು ಬ್ರಿಟೀಷರ ಗುಲಾಮಗಿರಿಯಿಂದ ಮುಕ್ತಗೊಳಿಸಲು ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಹಸ್ರಾರು ಮಹನೀಯರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಾವು ಇಂದು ಸ್ವತಂತ್ರರಾಗಿದ್ದೇವೆ. ಸಮಾನತೆ, ಶೈಕ್ಷಣಿಕ, ವಿಜ್ಞಾನ, ತಂತ್ರಜ್ಞಾನ, ಬಾಹ್ಯಾಕಾಶಗಳಲ್ಲಿ ದೇಶವು ಸಾಕಷ್ಟು ಅಭಿವೃದ್ಧಿ ಸಾಧಿಸಿದ್ದೇವೆ, ಇನ್ನೂ ಸಾಧಿಸುವುದು ಸಾಕಷ್ಟಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಶುಕ್ರವಾರ ಸ್ಥಳೀಯ ನಗರಸಭಾ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರಿ್ಡಸಲಾಗಿದ್ದ 75ನೇಯ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತಿತರರ ನಿಸ್ವಾರ್ಥ ಸೇವೆಯಿಂದ 1947 ಅ.15 ರಂದು ನಮಗೆ ಸ್ವಾತಂತ್ರ್ಯ ದೊರಕಿದರೂ ನಮ್ಮದೇ ಸಂವಿಧಾನ ಹೊಂದಲು 3 ವರ್ಷಗಳ ಕಾಲಾವಕಾಶ ಬೇಕಾಯಿತು. ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾದ ಡಾ.ಬಿ.ಆರ್ ಅಂಬೇಡ್ಕರ್ ಶ್ರಮದ ಫಲವಾಗಿ 1950 ಜ.26 ರಂದು ಲೋಕಾರೆ್ಣ ಮಾಡಲಾಯಿತು, ಸಂವಿಧಾನದ ತಳಹದಿಯಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳು ಪ್ರಜಾಸತ್ತಾತ್ಮ ಸೇವೆ ಸಲ್ಲಿಸಬೇಕಾಗುತ್ತದೆ ಎಂದರು.
ತಹಸೀಲ್ದಾರ ಹನುಮಂತಪ್ಪ ಶಿರಹಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರು ರಾಷ್ಟ್ರಗೀತೆ, ರೈತ ಗೀತೆ ಮತ್ತು ನಾಡಗೀತೆಯನ್ನು ಹಾಡಿದರು. ಪೋಲಿಸ್, ಗೃಹರಕ್ಷಕ ದಳ, ಎನ್ಸಿಸಿ, ಸ್ಕೌಟ್ ಗೈಡ್ಸ್, ಸೇವಾದಳ ಹಾಗೂ ನಗರದ ವಿವಿಧ ಶಾಲೆಯ ವಿದ್ಯಾರ್ಥಿ/ವಿದ್ಯಾರ್ಥಿನಿಯರು ನಡೆಸಿದ ಪಥಸಂಚಲನ ಎಲ್ಲರ ಮನ ರಂಜಿಸಿದವು. ನಗರದ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ಸೂರೆಗೊಂಡವು.
ಪಿಸಿಎಆರ್ಡಿ ಬ್ಯಾಂಕ್ ಅಧ್ಯಕ್ಷ ಭೀಮಪ್ಪ ಕುಡಪಲಿ, ಟಿಎಪಿಸಿಎಂಎಸ್ ಅಧ್ಯಕ್ಷ ಯಲ್ಲರಡ್ಡಿ ರಡ್ಡೇರ, ನಗರಸಭಾ ಸದಸ್ಯರಾದ ಶೇಖಪ್ಪ ಹೊಸಗೌಡ್ರ, ಪುಟ್ಟಪ್ಪ ಮರಿಯಮ್ಮನವರ, ಬಿಇಒ ಎಂ.ಎಚ್.ಪಾಟೀಲ, ಪೌರಾಯುಕ್ತ ನಿಂಗಪ್ಪ ಕುಮ್ಮಣ್ಣನವರ., ತಾಪಂ ಇಒ ಸುಮಲತಾ ಎಸ್.ಪಿ, ಡಿವೈಎಸ್ಪಿ ಡಾಽ ಗೀರೀಶ ಬೋಜಣ್ಣನವರ ಹಾಗೂ ತಾಲೂಕಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ಬಿಇಒ ಎಂ.ಎಚ್.ಪಾಟೀಲ ಸ್ವಾಗತಿಸಿದರು. ಶಿಕ್ಷಕ ಎಂ.ಕೆ. ಸಾಲಿಮಠ ನಿರೂಪಿಸಿದರು. ಬಿಆರ್ಸಿ ಮಂಜು ನಾಯಕ ವಂದಿಸಿದರು.