ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ 76ನೇ ಸ್ವಾತಂತ್ರ್ಯ ದಿನ ಆಚರಣೆ
ಬಳ್ಳಾರಿ 16: ಬಳ್ಳಾರಿ ಜಿಲ್ಲಾ ನ್ಯಾಯಾಲಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಸೋಮವಾರದಂದು 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಧ್ವಜಾರೋಹಣಾ ನೇರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮಾಜಿ ಸೈನಿಕರಿಗೆ ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ವರ್ಗದವರು ಇದ್ದರು.