ಬ್ಯಾಂಕಾಕ್ ನಿಂದ 80 ಪ್ರಯಾಣಿಕರು ಬೆಂಗಳೂರಿಗೆ ಆಗಮನ
ಬೆಂಗಳೂರು, ಜೂನ್ 6: ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಥೈಲ್ಯಾಂಡ್ ನ ರಾಜಧಾನಿ ಬ್ಯಾಕಾಂಕ್ ನಿಂದ ಜೂನ್ 5ರ ರಾತ್ರಿ 10.45 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಪ್ಪತ್ತೆಂಟನೇ ಏರ್ ಇಂಡಿಯಾ ವಿಮಾನದಲ್ಲಿ 80 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 80 ಮಂದಿ ಪ್ರಯಾಣಿಕರಲ್ಲಿ ಒಂದು ಮಗು, 56 ಪುರುಷರು ಮತ್ತು 23 ಮಹಿಳೆಯರು ಇದ್ದಾರೆ. ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 80 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ. ಪ್ರಯಾಣಿಕರನ್ನು ಕ್ವಾರಂಟೈನ್ ಗೆ ಕಳುಹಿಸಿಕೊಡಲಾಯಿತು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 