ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ-2ರಲ್ಲಿ 80ನೇ ಸ್ವಾತಂತ್ರ್ಯೋತ್ಸವ
80th Independence Day Celebration at Government Model Primary School-2
ಲಕ್ಷ್ಮೇಶ್ವರ, ಆ.16: ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ-2ರಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕರ್ನಾಟಕ ಲೋಕಾಯುಕ್ತ ಅಧಿಕಾರಿ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿ ರಮಾಕಾಂತ ಚವ್ಹಾಣ ಅವರನ್ನು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಆತ್ಮೀಯವಾಗಿ ಸ್ವಾಗತಿಸಿದರು.
ಶಾಲೆಯ ಪ್ರಧಾನ ಗುರುಮಾತೆ ಎಸ್.ಎಚ್. ಉಮಚಗಿ ಅವರು ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದರು. ಬಳಿಕ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ರಾಷ್ಟ್ರಗೀತೆ, ದೇಶಭಕ್ತಿ ಗೀತೆಗಳನ್ನು ಹಾಡಿ ಸ್ವಾತಂತ್ರ್ಯೋತ್ಸವ ಆಚರಿಸಿದರು.
ವಿದ್ಯಾರ್ಥಿಗಳು ದೇಶಪ್ರೇಮಿಗಳ ವೇಷಭೂಷಣದಲ್ಲಿ ಪಾಲ್ಗೊಂಡು, ಸ್ವಾತಂತ್ರ್ಯೋತ್ಸವದ ಮಹತ್ವ ಕುರಿತು ಭಾಷಣ ಮಾಡಿದರು. ಮಾತನಾಡಿದ ಎಸ್.ಎಚ್. ಉಮಚಗಿ ಅವರು, ಅನೇಕ ದೇಶಪ್ರೇಮಿಗಳ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದ್ದು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುವುದೇ ಸ್ವಾತಂತ್ರ್ಯೋತ್ಸವದ ಉದ್ದೇಶವಾಗಿದೆ ಎಂದರು.
ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಲೋಕಾಯುಕ್ತ ಅಧಿಕಾರಿಯಾಗಿರುವ ರಮಾಕಾಂತ ಚವ್ಹಾಣ ಮಾತನಾಡಿ, ತಾವು ಇದೇ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, ಅಂದಿನ ಶಾಲೆಗೂ ಇಂದಿನ ಶಾಲೆಗೂ ಸಾಕಷ್ಟು ವ್ಯತ್ಯಾಸವಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಶಾಲೆ ಹಾಗೂ ತಂದೆ-ತಾಯಿಯ ಹೆಸರನ್ನು ಬೆಳಗಿಸಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಸದಸ್ಯರು, ಶಿಕ್ಷಕರು, ಅಡುಗೆ ಸಿಬ್ಬಂದಿ ಹಾಗೂ ಶಾಲೆಯ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 