ನರಗುಂದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
80th Independence Day Celebration at Naragunda Taluk Panchayat Office
ನರಗುಂದ 16: ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ. ಸರ್ಕಾರಿ ನೌಕರರಾದ ನಾವು ಸಾರ್ವಜನಿಕ ಸೇವೆಯನ್ನು ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ನಿರ್ವಹಿಸುವುದರ ಜೊತೆಗೆ ದೀನದಲಿತರು ಮತ್ತು ದುರ್ಬಲ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ಸಂಕಲ್ಪ ಮಾಡಬೇಕು ಎಂದು ಹೇಳಿದರು.
ಸಹಾಯಕ ನಿರ್ದೇಶಕ (ಅಕ್ಷರ ದಾಸೋಹ) ಎಂ.ಎಸ್. ಅಸುಂಡಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿದರು. ಸ್ವಾತಂತ್ರ್ಯಾನಂತರ ದೇಶದ ಏಕತೆ ಮತ್ತು ಅಭಿವೃದ್ಧಿಗೆ ಶ್ರಮಿಸಿದ ನಾಯಕರ ಕೊಡುಗೆಗಳನ್ನು ನೆನಪಿಸಿಕೊಂಡು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ವಿವರಿಸಿದರು.
ಬಳಿಕ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಕೇಂದ್ರ ಸರ್ಕಾರದ ನಿರ್ದೇಶನದಂತೆ **‘ನಶಾ ಮುಕ್ತ ಭಾರತ’**ಕ್ಕಾಗಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಸಂತೋಷಕುಮಾರ್ ಪಾಟೀಲ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರು, ಸಹಾಯಕ ನಿರ್ದೇಶಕ (ಅಕ್ಷರ ದಾಸೋಹ) ಎಂ.ಎಂ. ನಿಟ್ಟಾಳಿ, ಯೋಜನಾಧಿಕಾರಿ, ತಾಲ್ಲೂಕು ಪಂಚಾಯಿತಿ ಕಚೇರಿ ಸಿಬ್ಬಂದಿ, ವಿವಿಆರ್‌ಎಂ ಸಿಬ್ಬಂದಿ, ಎನ್‌ಆರ್‌ಎಂಎಂ ಹಾಗೂ ವಿಆರ್‌ಡಬ್ಲ್ಯು ಸಿಬ್ಬಂದಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 