ಧಾರವಾಡ ಜಿಲ್ಲೆಯಲ್ಲಿ 9 “ಕೋವಿಡ್-19” ಪ್ರಕರಣ
ಧಾರವಾಡ ಮೇ.12,ಗುಜರಾತಿನ ಅಹಮದಾಬಾದ್ ನಗರದಿಂದ ಜಿಲ್ಲೆಗೆ ಆಗಮಿಸಿರುವ 09 ಜನರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.ಗುಜರಾತಿನಿಂದ ಆಗಮಿಸಿದ ಈ ಎಲ್ಲಾ ವ್ಯಕ್ತಿಗಳನ್ನು ಜಿಲ್ಲೆಯ ಆಗಮನ ಕೇಂದ್ರದಲ್ಲಿ ನೋಂದಿಯಿಸಿಕೊಂಡು ಪ್ರತ್ಯೇಕವಾಗಿ ಇರಿಸಲಾಗಿತ್ತು. ಬಂದ ಕೂಡಲೇ ಮೂಗು ಮತ್ತು ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಸೋಂಕು ದೃಢಪಟ್ಟಿರುವದರಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೀಡಿತ - 879 ( 55 ) ,ಪೀಡಿತ -880 (31), ಪೀಡಿತ 881 ( 25), ಪೀಡಿತ -882 (70), ಪೀಡಿತ -883 (26), ಪೀಡಿತ -884 (18), ಪೀಡಿತ -885 (19), ಪೀಡಿತ -886 (20), ಪೀಡಿತ -887 (27) ಈ ಎಲ್ಲಾ ಒಂಬತ್ತು ಜನ ಪುರುಷರಲ್ಲಿ ಕೋವಿಡ್ ಸೋಂಕು ದೃಢಪಟ್ಟಿರುವದರಿಂದ ಜಿಲ್ಲೆಯಲ್ಲಿ ಇದುವರೆಗೆ ಪ್ರಕರಣಗಳ ಸಂಖ್ಯೆ 21 ರಷ್ಟಾಗಿವೆ. ಪ್ರಕರಣವಾಗಿದೆ. ಈಗಾಗಲೇ 07 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 